ದೇಶದ ಉಜ್ವಲ ಭವಿಷ್ಯಕ್ಕೆ ಮತದಾನ ಕಡ್ಡಾಯ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 94ನೇ ವಾರ್ಷಿರಾಮನಗರ: ಮತದಾನ ಅತ್ಯಂತ ಪಾವಿತ್ರ್ಯ ಕೆಲಸ ಹಾಗೂ ದೇಶದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಭದ್ರಪಡಿಸಲು ಕೈಜೋಡಿಸಬೇಕು ಎಂದು ಜಿಪಂ ಸಿಇಒ ಡಾ.ಎಂ.ವಿ.ವೆಂಕಟೇಶ್ ಕಿವಿಮಾತು ಹೇಳಿದರು.
ನಗರದ ಸರ್ಕಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮತದಾನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಹೀಗಾಗಿ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮತದಾನ ಕುರಿತು ಜಾಗೃತಿಯಂತಹ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಮತ ಚಲಾವಣೆ ಆಗುವಂತೆ ಪ್ರೇರೇಪಿಸುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಈ ಪ್ರಯತ್ನಕ್ಕೆ ಸಾರ್ವಜನಿಕರ ಸ್ಪಂದನೆ ಅಗತ್ಯ ಎಂದು ತಿಳಿಸಿದರು.
ಕತ್ತಿಗಿಂತ ಹರಿತ ಮತ: ಭಾರತದಲ್ಲಿ 81 ಕೋಟಿ ಮತದಾರರಿದ್ದಾರೆ. ಮತ ಚಲಾವಣೆಯು ಕತ್ತಿಗಿಂತ ಮತದಾನವು ಹರಿತವಾದ ಅಸ್ತ್ರವಾಗಿದೆ. ಮುಕ್ತ, ನ್ಯಾಯಸಮ್ಮತ ಚುನಾವಣೆಯಿಂದ ಪ್ರಜಾಪ್ರಭುತ್ವದ ಘನತೆ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಮತಕ್ಕೆ ಮಹತ್ವ: ಎಷ್ಟೋ ಬಾರಿ ಕೆಲ ಅಭ್ಯರ್ಥಿಗಳು ಒಂದು ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಮತದಾನ ನಮಗೆ ವರದಾನವಾಗಿದೆ. ಮತದಾನ ಮಾಡುವುದರಿಂದ ದೇಶದ ಅಭಿವೃದ್ಧಿಯಲ್ಲಿ ನಾವೂ ಪಾತ್ರ ವಹಿಸಬಹುದಾಗಿದೆ ಎಂದು ವೆಂಕಟೇಶ್ ಕಿವಿಮಾತು ಹೇಳಿದರು.
ಶೌಚಾಲಯ ನಿರ್ಮಿಸಿಕೊಳ್ಳಿ: ವಯಕ್ತಿಕ ಶೌಚಾಲಯ ಹೊಂದಿಲ್ಲದವರು 2014-15ರ ಅವಧಿಯಲ್ಲಾದರೂ ಕಡ್ಡಾಯವಾಗಿ ಶೌಚಾಲಯ ಕಟ್ಟಿಕೊಳ್ಳುತ್ತೇವೆ ಎಂದು ಶಪಥ ಮಾಡಬೇಕು. ಶೌಚಾಲಯದಿಂದಾಗುವ ಅನುಕೂಲಗಳ ಬಗ್ಗೆ ಹಾಗೂ ಶೌಚಾಲಯ ಇಲ್ಲದಿದ್ದರೆ ಆಗುವ ಅನಾನುಕೂಲಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಯುವ ಸಮುದಾಯದ ಕರ್ತವ್ಯ ಎಂದರು.
ಜಾಗೃತಿ ಜಾಥಾ: ನಗರದ ಅಂಬೇಡ್ಕರ್ ಭವನದಿಂದ ಹೊರಟ ಮತದಾನ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶಗೊಂಡಿತು. ಜಾಥಾದಲ್ಲಿ ಅಪರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಪಂ ಸಿಪಿಒ ಧನುಷ್, ಡಿಡಿಪಿಐ ಪ್ರಹ್ಲಾದಗೌಡ, ಡಿಡಿಪಿಯು ಲಿಂಗರಾಜು, ಜಿಲ್ಲಾ ವಾರ್ತಾಧಿಕಾರಿ ಹಮೀದ್ಖಾನ್ ಮತ್ತಿತರರು ಭಾಗವಹಿಸಿದ್ದರು.