ಮೊದಲ ದಿನ 32 ನಾಮಪತ್ರ ಸಲ್ಲಿಕೆ
ಬೆಂಗಳೂರು: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೆ ರಾಜ್ಯದಲ್ಲಿ ಕೊನೆಗೂ ಅಧಿಸೂಚನೆ ಹೊರಡಿಸಲಾಗಿದ್ದು, ಮೊದಲ ದಿನ 32 ನಾಮಪತ್ರ ಸಲ್ಲಿಕೆಯಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಅನಂತ್‌ಕುಮಾರ್ ಸೇರಿದಂತೆ ಘಟಾನುಘಟಿ ನಾಯಕರೇ ಎರಡೆರಡು ನಾಮಪತ್ರ ಸಲ್ಲಿಸಿರುವುದು ಮೊದಲನೇ ದಿನದ ವಿಶೇಷ.
ಬಾಗಲಕೋಟೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿವೃತ್ತ ಡಿಜಿಪಿ ಶಂಕರ್ ಬಿದರಿ, ತುಮಕೂರಿನಿಂದ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ, ಕೋಲಾರದಿಂದ ಚುನಾವಣೆಗೆ ನಿಂತಿರುವ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ, ಹಾಸನದಿಂದ ಸ್ಪರ್ಧಿಸುತ್ತಿರುವ ಟಿ.ಜೆ. ಅಬ್ರಾಹಂ ಸೇರಿದಂತೆ ಕೆಲವರು ಎರಡೆರಡು ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಉಡುಪಿ ಕ್ಷೇತ್ರದಿಂದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಮೊದಲ ದಿನ ಒಟ್ಟು 32 ನಾಮಪತ್ರ ಸಲ್ಲಿಕೆಯಾಗಿದೆ.