ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಮೋದಿ ಪ್ರಧಾನಿ ಆಗಲೇಬೇಕು

Mainashree
Updated On : 20 Mar 2014, 12:50 pm

ನೆಲಮಂಗಲ: ದೇಶಕ್ಕೆ ಮೋದಿಯವರವರನ್ನು ಪ್ರಧಾನಿಯಾಗಿಸುವುದು ನಮ್ಮೆಲ್ಲರ ಕೈಯಲ್ಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಹೇಳಿದರು.
ಅವರು ಬುಧವಾರ ಪಟ್ಟಣದ ಬಸವಣ್ಣ ದೇವರ ಮಠದ ಆವರಣದಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡುತ್ತಾ ದಿನ ನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿರುವುದರಿಂದ ಶ್ರೀಸಾಮಾನ್ಯನ ಜೀವನ ಮಟ್ಟ ಕುಸಿದಿದೆ. ಪ್ರಗತಿಗಾಗಿ, ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ  ಅಧಿಕಾರಕ್ಕೆ ಬರಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೂರಾರು ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿ ನಡೆದಿದೆ. ಜನಸಾಮಾನ್ಯರಿಗೆ ಹಲವು ಯೋಜನೆಗಳನ್ನು ಬಿಜೆಪಿ ಸರ್ಕಾರ ನೀಡಿದೆ.
 ಬಿಜೆಪಿ ಬೆಂಬಲಿಸುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಸಾಧ್ಯವಾಗುತ್ತದೆ ಎಂದರು.
ಮಾಜಿ ಶಾಸಕ ಎಂ.ವಿ.ನಾಗರಾಜು, ತಾ.ಭಾ.ಜ.ಪ ಅಧ್ಯಕ್ಷ ಜಗದೀಶ್ ಪ್ರಸಾದ್, ಮುಖಂಡರಾದ  ಕಾಂತರಾಜು, ಬೈರೇಗೌಡ, ಕರಿವರದಯ್ಯ, ಸೌಮ್ಯ, ಕೇಶವಮೂರ್ತಿ, ನಾಗೇಂದ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement