ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಸುದ್ದಿ ಸಂಕ್ಷೇಪ

Mainashree
Updated On : 20 Mar 2014, 12:44 pm

ಎನ್ಎಸ್ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರ
ಚನ್ನಪಟ್ಟಣ: ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದ ವಿಶೇಷ ವಾರ್ಷಿಕ ಶಿಬಿರ  ತಾಲೂಕಿನ ಎಚ್.ಬ್ಯಾಡರಹಳ್ಳಿ ಗ್ರಾಮದಲ್ಲಿ ಮಾ.20ರಿಂದ 10 ದಿನಗಳ ಕಾಲ ನಡೆಯಲಿದೆ. ವಿಶೇಷ ವಾರ್ಷಿಕ ಶಿಬಿರವನ್ನು ತಹಸೀಲ್ದಾರ್ ಅರುಣಪ್ರಭ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಲಿಂಗಣ್ಣಯ್ಯ, ಕನ್ನಡ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ಗೌಡ, ಎನ್ಎಸ್ಎಸ್ ಅಧಿಕಾರಿ ಮಹೇಶ್. ಆರ್ ಇನ್ನೂ ಮುಂತಾದವರು ಉಪಸ್ಥಿತರಿರುವರು. ಶಿಬಿರದಲ್ಲಿ ಪ್ರತಿದಿನ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಉಪನ್ಯಾಸ ಶಿಬಿರವನ್ನು ಹಮ್ಮಿಕೊಂಡಿದ್ದು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಗ್ರಾಮದ ರಸ್ತೆಗಳ ಅಭಿವೃದ್ಧಿ, ಗಿಡನೆಡುವುದು, ಕೆರೆಸ್ವಚ್ಛತೆ ಹಾಗೂ ಸಾರ್ವಜನಿಕರಿಗೆ ಉಪಯುಕ್ತ ವಿಷಯಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾ.26 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಸರ್ಜನ್ ಡಾ. ವಿಜಯನರಸಿಂಹ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಲಿಂಗಣ್ಣಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ. ಎನ್ಎಸ್ಎಸ್ ಅಧಿಕಾರಿ ಶ್ರೀಕಾಂತ್ ಕಾರ್ಯಕ್ರಮದಲ್ಲಿ ಶಿಬಿರದ ವರದಿ ಓದಲಿದ್ದಾರೆ.
ರಕ್ತದಾನ ಮಾಡಿ ಜೀವ ಉಳಿಸಿ: ನೀಲಕಂಠಯ್ಯ
ಆನೇಕಲ್ಲು: ಆನೇಕಲ್ ತಾಲೂಕು ಚಂದಾಪುರದ ಆಸರೆ ಫೌಂಡೇಷನ್, ಆರ್ಟ್ ಆಫ್ ಲಿವಿಂಗ್ ಮತ್ತು ಸ್ಥಳೀಯ ಸಂಘಗಳ ಸಹಯೋಗದೊಂದಿಗೆ ಚಂದಾಪುರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾವರಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಜೀವ ಉಳಿಸಿ ಆಂದೋಲನದಲ್ಲಿ ಪಾಲ್ಗೊಳ್ಳಬೇಕೆಂದು ಸಂಚಾಲಕ ನೀಲಕಂಠಯ್ಯ ಕೋರಿದ್ದಾರೆ. 23ರಂದು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗುವ ಶಿಬಿರದಲ್ಲಿ ರಕ್ತದಾನದ ಮಹತ್ವ ಮತ್ತು ಆರೋಗ್ಯ ವೃದ್ಧಿ ಬಗ್ಗೆ ತಜ್ಞರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 98452 91603 ಸಂಪರ್ಕಿಸೂಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement