ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್‌ನಿಂದ ನೀತಿ ಸಂಹಿತೆ ಉಲ್ಲಂಘನೆ: ದೂರು

Mainashree
Updated On : 21 Mar 2014, 12:44 pm

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ, ಸಚಿವರು ಮತ್ತು ಮುಖಂಡರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ನಾಗರಾಜು ಅವರು ಚುನಾವಣಾಧಿಕಾರಿಗೆ ಗುರುವಾರ ದೂರು ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಸಮಾರಂಭಕ್ಕೆ ಜನರನ್ನು ಕರೆತರಲು ಅನುಮತಿ ಪಡೆದಿದ್ದಕ್ಕಿಂತ ಸಾಕಷ್ಟು ಸಂಖ್ಯೆಯಲ್ಲಿ ವಾಹನಗಳನ್ನು ಬಳಸಿಕೊಳ್ಳಲಾಗಿದೆ. ಬಂದ ಕಾರ್ಯಕರ್ತರೆಲ್ಲರಿಗೂ ಟೋಪಿ ವಿತರಿಸಿದ್ದು, ಅದಕ್ಕೆ
ತಗುಲಿರುವ ಖರ್ಚನ್ನು ಕಾಂಗ್ರೆಸ್ ಅಭ್ಯರ್ಥಿ ಲೆಕ್ಕಕ್ಕೆ ಸೇರಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.  ಅಭ್ಯರ್ಥಿಯು ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದಾಗ ಮುಖ್ಯದ್ವಾರದವರೆಗೆ ಅವರನ್ನು ನೂರಾರು ಹಿಂಬಾಲಕರು ಹಿಂಬಾಲಿಸಿದ್ದಾರೆ. ಅಧಿಕಾರಿಗಳು ಮತ್ತು ಪೊಲೀಸರು ಆಡಳಿತ ಪಕ್ಷದವರಿಗೆ ಹೆದರಿ ಹೀಗೆ ನಿಯಮ ಸಡಿಲಿಸಿರುವುದು ಎಷ್ಟು ಸಮಂಜಸ ಎಂದು ಅವರು ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಗೂ ಆಕ್ಷೇಪ: ಅಭ್ಯರ್ಥಿ ಡಿ.ಕೆ.ಸುರೇಶ್, ಸಚಿವ ಡಿ.ಕೆ.ಶಿವಕುಮಾರ್, ಶಾಸಕ ಸಿ.ಪಿ.ಯೋಗೇಶ್ವರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ನಿಷೇಧಿತ ಪ್ರದೇಶದಲ್ಲೇ ಸುದ್ದಿಗೋಷ್ಠಿ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಬಗ್ಗೆಯೂ ದೂರುದಾರ ನಾಗರಾಜು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.  
ಪರಿಶೀಲಿಸಿ ಕ್ರಮ: ನಾಮಪತ್ರ ಸ್ವೀಕಾರ ಅವಧಿ ಬಳಿಕ ಚುನಾವಣಾ ಲೆಕ್ಕ ವೀಕ್ಷಕರ ಸಭೆಗೆ ತೆರಳಿದ್ದರಿಂದ ನಾನು ಮಧ್ಯಾಹ್ನ 3ರ ನಂತರ ಕಚೇರಿಯಲ್ಲಿ ಲಭ್ಯವಿರಲಿಲ್ಲ. ದೂರುದಾರರು ದೂರನ್ನು ಕಚೇರಿಗೆ ತಲುಪಿಸಿರಬಹುದು. ಆ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮತ್ತು ಚುನಾವಣಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಕನ್ನಡಪ್ರಭಕ್ಕೆ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement