ಚುನಾವಣೆ ವೀಕ್ಷಕರಾಗಿ ಪಾಂಡೆ ಯಾದವ್ ನೇಮಕ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಪಾಂಡೆ ಯಾದವ್ ಅವರನ್ನು ಚುನಾವಣಾ ಆಯೋಗ ಚುನಾವಣಾ ವೆಚ್ಚದ ವೀಕ್ಷಕರನ್ನಾಗಿ ನೇಮಿಸಿದೆ. ಪಾಂಡೆ ಯಾದವ್ ಅವರು ಮಾಗಡಿ ತಾಲೂಕು ಕಚೇರಿಯಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚ ನೋಡಿಕೊಳ್ಳುವ ಲೆಕ್ಕಪತ್ರ ಅಧಿಕಾರಿಗಳ ತಂಡದ ಜೊತೆ ಚರ್ಚಿಸಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಲೆಕ್ಕ ಇಡುವ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ, ತಾಲೂಕು ಮಟ್ಟದಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚ ನೋಡಿಕೊಳ್ಳುವ ಸಹಾಯಕ ವೆಚ್ಚದ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳು, ತಾಲೂಕು ಕಚೇರಿ ಚುನಾವಣಾ ವೆಚ್ಚದ ವಿಭಾಗದ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರಮಾಣೀಕರಣ ಮತ್ತು ನಿರ್ವಹಣಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಶೈಲಜಾ, ತಹಶೀಲ್ದಾರ್ ಸಿ.ಎಚ್.ಶಿವಕುಮಾರ್ ಇತರರು ಇದ್ದರು.