ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

25ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

Rashmi Kasaragodu
Updated On : 25 Mar 2014, 1:38 am

ಕನಕಪುರ: ಸದಾ ಬರಗಾಲಕ್ಕೆ ಸಿಲುಕುತ್ತಿರುವ ಕನಕಪುರ ತಾಲೂಕಿಗೆ ನೀರಾವರಿ ಸೌಲಭ್ಯಗಳನ್ನು ಕಲ್ಪಿಸುವುದೇ ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.  ಅವರು ಸಾತನೂರು ಹಾಗೂ ಕೋಡಿಹಳ್ಳಿ ಹೋಬಳಿಗಳಲ್ಲಿ ಜೆಡಿಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಮುಖಂಡ ಭೂಹಳ್ಳಿ ಉಮೇಶ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯದೇವ್, ರಾಮಣ್ಣ, ಸಾತನೂರು ಗ್ರಾಪಂ ಅಧ್ಯಕ್ಷ ನಾಗರಾಜು ಇತರರು ಇದ್ದರು.



ಹೊಸಕೋಟೆ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸೂಕ್ಷ್ಮ ಮತ ಕೇಂದ್ರ: ಡಿಸಿ
ಸೂಲಿಬೆಲೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಹೊಸಕೋಟೆ ವಿದಾನಸಭಾ ಕ್ಷೇತ್ರವು ರಾಜ್ಯದಲ್ಲಿಯೇ ಹೆಚ್ಚಿನ ಅತಿ ಸೂಕ್ಷ್ಮ ಮತ ಕೇಂದ್ರಗಳನ್ನು ಹೊಂದಿದ್ದು, ಚುನಾವಣೆಗೆ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿಯೂ ಯಾವುದೇ ಭಯ, ಭೀತಿ ಇಲ್ಲದೆ ಹಾಗೂ ಒತ್ತಡಕ್ಕೆ ಒಳಗಾಗದೇ ನಿಷ್ಪಕ್ಷಪಾತವಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಹೇಳಿದ್ದಾರೆ. ಹೊಸಕೋಟೆ ತಾ. 5 ಕಡೆ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಸಂಪರ್ಕದಲ್ಲಿ ಇರಲು ತಂಡದ ಮುಖ್ಯಸ್ಥರಿಗೆ ವಾಕಿಟಾಕಿ ನೀಡಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement