ಎಚ್‌ಡಿಕೆ ನಾಮಪತ್ರ ಸಲ್ಲಿಕೆ ನಾಳೆ
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾ.26ರ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮುಖಂಡ ಇ.ಕೃಷ್ಣಪ್ಪ ಹೇಳಿದರು. ಇಲ್ಲಿನ ಖಾಸಗಿ ಸ್ಥಳಮೊಂದರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಗ್ಗೆ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದು ಅಭ್ಯರ್ಥಿಯಾಗುವುದು ಖಚಿತವಾಗಿದೆ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ. ರಾಮನಗರದ ಕಾರ್ಯಕರ್ತರೂ ಕೂಡ ಎಚ್‌ಡಿಕೆ ನಿಲುವಿಗೆ ಬದ್ಧರಾಗಿದ್ದಾರೆ. ಹೀಗಾಗಿ ಚಿಕ್ಕಬಳ್ಳಾಪುರ ಅಖಾಡಕ್ಕೆ ಅವರು ಬರುವುದು ನಿಶ್ಚಿತ ಎಂದರು.