ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ನಗರಸಭಾ ಉಪಾಧ್ಯಕ್ಷೆ ಮಂಜುಳಾಗೆ ಸನ್ಮಾನ

Rashmi Kasaragodu
Updated On : 25 Mar 2014, 1:40 am

ದೊಡ್ಡಬಳ್ಳಾಪುರ: ಇಲ್ಲಿನ ನಗರಸಭೆಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕನ್ನಡಪಕ್ಷದ ಜಿ.ಮಂಜುಳಾ ಅವರನ್ನು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹ.ರಾಮಕೃಷ್ಣ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಗರಸಭಾ ಉಪಾಧ್ಯಕ್ಷೆ ಮಂಜುಳಾ, ಕಳೆದ 6 ವರ್ಷಗಳಿಂದ ಅರಾಜಕತೆಗೊಂಡಿರುವ ನಗರಸಭೆಯ ಆಡಳಿತವನ್ನು ಸರಿದಾರಿಗೆ ತರುವ ಮಹತ್ವದ ಹೊಣೆಗಾರಿಕೆ ಎಲ್ಲರ ಮೇಲಿದೆ. ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಸುಸೂತ್ರವಾಗಿ ಆಗಬೇಕಿದೆ. ಜನರಿಗೆ ನಗರಸಭೆ ಆಡಳಿತ ಹತ್ತಿರವಾಗಬೇಕು ಎಂದು ತಿಳಿಸಿದರು.ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹ.ರಾಮಕೃಷ್ಣ ಮಾತನಾಡಿ, ಪ್ರಾದೇಶಿಕ ಪಕ್ಷವಾಗಿ
ಕನ್ನಡಪಕ್ಷ ದೊಡ್ಡಬಳ್ಳಾಪುರದಲ್ಲಿ ಗಟ್ಟಿಯಾದ ತಳಹದಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮೂಲಕ ಹಲವು ಪ್ರಗತಿಪರ ಕೆಲಸಗಳು ಆಗಬೇಕಿದ್ದು ಅದಕ್ಕೆ ಪೂರಕವಾಗಿ ನಗರಸಭೆ ಆಡಳಿತ ನಡೆಯಬೇಕು ಎಂದರು. ಸಂಘದ ಉಪಾಧ್ಯಕ್ಷ ಸು.ನರಸಿಂಹಮೂರ್ತಿ, ಕನ್ನಡಪಕ್ಷದ ಅಧ್ಯಕ್ಷ ಸಂಜೀವನಾಯಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಕೇಬಲ್ ರಾಜು, ಕೆ.ಕೆ.ವೆಂಕಟೇಶ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement