ಹಳ್ಳಕ್ಕೆ ಕಾರು ಬಿದ್ದು ಮೂವರಿಗೆ ಗಾಯ
ಭಾರತೀನಗರ: ಮಾರುತಿ ಸ್ವಿಪ್ಟ್ ಕಾರೊಂದು ಆಯತಪ್ಪಿ ಹಳ್ಳಕ್ಕೆ ಬಿದ್ದು 3 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಹನುಮಂತನಗರದ ತಿರುವಿನಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ರಾಜಶೆಟ್ಟಿಪುರ ಗ್ರಾಮದ ಬೆಂಗಳೂರಿನಲ್ಲಿ ವಾಸವಾಗಿರುವ ಕೆ.ನಾಗರಾಜು ಬಿನ್ ಕರಿಯಪ್ಪ, ರಾಜು ಬಿನ್ ಶಿವಣ್ಣ, ರವಿ ಗಾಯಗೊಂಡವರು. ಆತ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮದುವೆಗೆಂದು ಬಂದಿದ್ದ ಇವರು, ಸೋಮವಾರ ರಾತ್ರಿ ವಾಪಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕ ಮದ್ಯಪಾನ ಮಾಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ