ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಕ್ಷರದೋಸಾ ವಿನೂತನ ಜಾಗೃತಿ ಕಾರ್ಯಕ್ರಮ

Rashmi Kasaragodu
Updated On : 27 Mar 2014, 1:10 am

ರಾಮನಗರ: ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಅಕ್ಷರದೋಸಾ ಎಂಬ ವಿನೂತನ ಜಾಗೃತಿ ಕಾರ್ಯಕ್ರಮವು ಮಾ.27ರಂದು ಗುರುಭವನದಲ್ಲಿ ಮಧ್ಯಾಹ್ನ 3ಕ್ಕೆ ಜಿಲ್ಲಾ ಪಂಚಾಯಿತಿ, ಸ್ವೀಪ್ ಕಮಿಟಿ ಹಾಗೂ ಅಕ್ಷರ ದಾಸೋಹ ವಿಭಾಗದಿಂದ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಅಕ್ಷರ ದಾಸೋಹ ಸಿಬ್ಬಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿ.ಪಂ. ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಂ.ವಿ. ವೆಂಕಟೇಶ್ ಕೋರಿದ್ದಾರೆ.  ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕವಿಗೋಷ್ಠಿ, ಮ್ಯಾರಥಾನ್ ಓಟ, ಪಂಜಿನ ಮೆರವಣಿಗೆಯನ್ನು ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳಿಗೆ ಹಾಗೂ ಅಲ್ಲಿಂದ ಗ್ರಾ.ಪಂ.ಗಳಿಗೆ ತಲುಪಿಸಲು ಯೋಜಿಸಲಾಗಿದೆ. ಮದುವೆ ಮತ್ತಿತರ ಶುಭ ಸಮಾರಂಭಗಳು ಜರುಗುವ ಕಲ್ಯಾಣ ಮಂಟಪಗಳಲ್ಲಿ ಚುನಾವಣಾ ಮತದಾನದ ಅರಿವಿನ ಭಿತ್ತಿ ಪತ್ರಗಳು, ಕರಪತ್ರಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ವೆಂಕಟೇಶ್ ತಿಳಿಸಿದ್ದಾರೆ.
ಗ್ರಾಮೀಣಾ ಕಲಾ ಪ್ರತಿಭೋತ್ಸವ ಇಂದು
ನೆಲಮಂಗಲ: ಪಟ್ಟಣದ ಸದಾಶಿವನಗರದಲ್ಲಿ ರಂಗ ಶಿಕ್ಷಣ ಕೇಂದ್ರದ ವತಿಯಿಂದ ಮಾ. 27ರಂದು ಸಂಜೆ 4.30ಕ್ಕೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಿಂದ ಗ್ರಾಮೀಣಾ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಬೆಂಗಳೂರು ವಿಶ್ವವಿದ್ಯಾಲಯ ನಾಟಕ ಪ್ರವಾಚಕ ಡಾ.ಕೆ. ರಾಮಕೃಷ್ಣ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಹರ್ಷ ಗ್ರೂಪ್ಸ್ ಹರ್ಷ ಇಂಟರ್ ನ್ಯಾಷನಲ್‌ನ ಚೇರ್ಮ್‌ನ್ ಶಿವಕುಮಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.   ಜನಪದ ಗಾಯನ, ವೀರಭದ್ರ ಕುಣಿತ, ಕಂಸಾಳೆ, ಸೋಮನ ಕುಣಿತ, ವಿಚಾರ ಸಂಕಿರರ್ಣ, ಕೋಲಾಟ, ನಾಟಕವನ್ನು ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ನಾಗರಿಕ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಕಲಾವಿದ ತಿಮ್ಮರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement