ಎಸ್ಎಸ್ಎಲ್ಸಿ ಪರೀಕ್ಷೆಗೆ 2,848 ಮಂದಿ ವಿದ್ಯಾರ್ಥಿಗಳು
ಮಾಗಡಿ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಮಾ.28 ರಿಂದ ಆರಂಭವಾಗಲಿದ್ದು, ಮಾಗಡಿ ತಾಲೂಕಿನಲ್ಲಿ 1,462 ಮಂದಿ ವಿದ್ಯಾರ್ಥಿಗಳು, 1,386 ಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು 2,848 ಮಂದಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕುಳಿತು ಉತ್ತರ ಬರೆಯಲಿದ್ದಾರೆ. ತಾಲೂಕಿನಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 63 ಶಾಲೆಗಳಿಂದ 2,848 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. 170 ಮಂದಿ ಕೊಠಡಿ ಮೇಲ್ವಿಚಾರಕರು, 26 ಮಂದಿ ಸ್ಥಾನಿಕ ಜಾಗೃತದಳವನ್ನು ರಚಿಸಲಾಗಿದೆ ಪರೀಕ್ಷಾ ಕೇಂದ್ರದಲ್ಲಡೆ ಭಾರಿ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಆರ್. ರಂಗಸ್ವಾಮಿ ತಿಳಿಸಿದ್ದಾರೆ.
ಮತ್ತೆ ಯುಪಿಎಗೆ ಅಧಿಕಾರ: ಸಚಿವ ರೆಡ್ಡಿ
ಆನೇಕಲ್ಲು: ಯುಪಿಎ-3 ಮತ್ತೆ ದೇಶದ ಚುಕ್ಕಾಣಿ ಹಿಡಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿ ರಾಜ್ಯದಲ್ಲೂ 25 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದರು.