ಜೂಜು ಅಡ್ಡೆಗಳ ಮೇಲೆ ದಾಳಿ: 4 ಮಂದಿ ಬಂಧನ
ದೊಡ್ಡಬಳ್ಳಾಪುರ: ತಾಲೂಕಿನ 2 ಕಡೆಗಳಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಒಟ್ಟು 7 ಮಂದಿಯನ್ನು ಬಂಧಿಸಿದ್ದಾರೆ. ತಾಲೂಕಿನ ಕಂಟನಕುಂಟೆ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿ, 3 ಆರೋಪಿಗಳನ್ನು ಬಂಧಿಸಿದ ಪೊಲೀಸರು ಆರೋಪಿಗಳಿಂದ 3 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಮರಳೇನಹಳ್ಳಿ ಗ್ರಾಮದಲ್ಲೂ ದಾಳಿ ಮುಂದುವರೆಸಿದ ಪೊಲೀಸರು 4 ಮಂದಿಯನ್ನು ವಶಕ್ಕೆ ಪಡೆದಿದ್ದು, ಆರೋಪಿಗಳಿಂದ 38 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.