ಡಿ.ಕೆ. ಸುರೇಶ್ ಚುನಾವಣಾ ಪ್ರಚಾರ ನಾಳೆ
ಚನ್ನಪಟ್ಟಣ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ. ಸುರೇಶ್ ಮಾ. 29 ರಂದು ತಾಲೂಕಿನ ಕೆಲ ಗ್ರಾಮಮತ್ತು ಪಟ್ಟಣದ ಕೆಲ ವಾರ್ಡ್ಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಾಲೂಕು ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ. ಶಾಸಕ ಸಿ.ಪಿ.ಯೋಗೇಶ್ವರ್ ಜತೆ ಚುನಾವಣಾ ಪ್ರಚಾರ ನಡೆಸಲಿದ್ದು, ತಾಲೂಕಿನ ಕೆಂಗಲ್ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ತಮ್ಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಸಿ.ವೀರೇಗೌಡ, ಶಿವಮಾದು ಹಾಗೂ ತಾಲೂಕು ಕಾಂಗ್ರೆಸ್ನ ಸ್ಥಳೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.