ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕಡ್ಡಾಯ ಮತದಾನ: ಪುರಸಭೆ ಸಿಬ್ಬಂದಿಯಿಂದ ಜಾಥಾ

Rashmi Kasaragodu
Updated On : 29 Mar 2014, 2:22 am

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ವ್ಯಾಪ್ತಿಗೆ ಸೇರಿದ ದೇವನಹಳ್ಳಿಯಲ್ಲಿ ಇಲ್ಲಿನ ಪುರಸಭೆ ವತಿಯಿಂದ ಕಡ್ಡಾಯ ಮತದಾನ ಎಲ್ಲ ನಾಗರಿಕರ ಸಂವಿಧಾನಿಕ ಹಕ್ಕಾಗಿದೆ. ಆದ್ದರಿಂದ ಏ .17 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮತಚಲಾಯಿಸುವ ಬಗ್ಗೆ ಅರಿವು ಮೂಡಿಸಲು ಶುಕ್ರವಾರ ಜಾಥಾ ಆಯೋಜಿಸಲಾಗಿತ್ತು. ತಹಸೀಲ್ದಾರ್ ಕೇಶವಮೂರ್ತಿ ಜಾಥಾಗೆ ಚಾಲನೆ ನೀಡಿದರು.
ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಸಾಮಾನ್ಯ ಜನರ ಕೈಲಿದೆ, ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಬಿ.ಶಿವಸ್ವಾಮಿ ತಿಳಿಸಿ, ಹೊಸದಾಗಿ ಮತದಾನದ ಹಕ್ಕನ್ನು ಪಡೆದಿರುವ ಯುವಕ ಯುವತಿಯರು  ಮತದಾನ ಮಾಡಿ ಮತದಾನ ಮಹತ್ವ ತಿಳಿಯಿರಿ ಎಂದರು.
ಯಾವುದೇ ರೀತಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾಗರಿಕರು ಸಹಕರಿಸಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ತಿಳಿಸಿದರು.  ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಲೋಹಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement