ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಗ್ರಾಮೀಣ ಮಹಿಳೆಯರು ವಿಶ್ವಾಸದ ಬದುಕು ಕಟ್ಟಿಕೊಳ್ಳಲಿ

Rashmi Kasaragodu
Updated On : 30 Mar 2014, 2:26 am

ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶದ ಮಹಿಳೆಯರು ಆತ್ಮವಿಶ್ವಾಸದ ಬದುಕು ಕಟ್ಟಿಕೊಳ್ಳಲು ಬೇಕಾದ ಮಾರ್ಗದರ್ಶನವನ್ನು ನೀಡುವ ಅನಿವಾರ್ಯತೆ ಇದೆ ಎಂದು ಸುಮಂಗಲಿ ಸೇವಾಶ್ರಮದ ಜಯಂತಿ ಹೆಬ್ಬಾರ್ ಅಭಿಪ್ರಾಯಪಟ್ಟರು.
ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಪ್ರತಿಷ್ಠಾನ ಆಯೋಜಿಸಿದ್ದ ಮಹಿಳಾ ಸಬಲೀಕರಣ ಚಿಂತನಾ ಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಹಿಳೆ ಸಮಾಜದ ಮುಖ್ಯ ಅಂಗ. ಎಲ್ಲ ಕ್ಷೇತ್ರಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿರುವ ಆಕೆ ತನ್ನ ಆತ್ಮಾಭಿಮಾನಕ್ಕೆ ಹೆಚ್ಚಿನ ಒತ್ತು ನೀಡುತ್ತಾಳೆ. ಸ್ವಾಭಿಮಾನಿ ಚಿಂತನೆಗಳನ್ನು ಗೌರವಿಸುವ ಮತ್ತು ಆದರಿಸುವ ಅಗತ್ಯವಿದೆ. ಮಹಿಳಾ ಶಿಕ್ಷಣವನ್ನು ಪ್ರಚೋದಿಸುವ ಮತ್ತು ಸಾರ್ವತ್ರೀಕರಣಗೊಳಿಸುವ ಪ್ರಯತ್ನಗಳು ಗಣನೀಯ ಪ್ರಮಾಣದಲ್ಲಿ ಆಗಿರುವುದು ಉತ್ತಮ ಬೆಳವಣಿಗೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement