ಸಾರಿಗೆ ಬಸ್ ಇಂಜಿನ್ನಲ್ಲಿ ಬೆಂಕಿ: 60 ಪ್ರಯಾಣಿಕರು ಪಾರು
ಮದ್ದೂರು: ಸಾರಿಗೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಬೋರಾಪುರ ಗ್ರಾಮ ಬಳಿ ಶುಕ್ರವಾರ ರಾತ್ರಿ ಜರುಗಿದೆ.
ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ರಾತ್ರಿ 8.30 ರ ಸುಮಾರಿಗೆ ಬೋರಾಪುರದ ಗ್ರಾಮದ ಬಳಿ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಬಸ್ ಮುಂಭಾಗದ ಇಂಜಿನ್ನಲ್ಲಿ ದಟ್ಟ ಹೊಗೆ ಆವರಿಸಿಕೊಂಡು ಬೆಂಕಿ ಕಾಣಿಸಿಕೊಂಡಿದೆ.
ಇದರಿಂದ ಭಯ ಬೀತರಾದ ಚಾಲಕ ಮತ್ತು ಪ್ರಯಾಣಿಕರು ತಕ್ಷಣ ಬಸ್ಸಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಂತರ ಸುದ್ಧಿತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ತಂಡ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಮದ್ದೂರು ಸಾರಿಗೆ ಸಂಸ್ಥೆ ಡಿಪೋ ಅಧಿಕಾರಿಗಳು ಮತ್ತು ಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.