ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಟೋಲ್ ಕಡಿಮೆ ಮಾಡದಿದ್ದರೆ ಮತ್ತೆ ಹೋರಾಟ

Srinivasa Murthy VN
Updated On : 10 May 2014, 12:27 pm

ದೇವನಹಳ್ಳಿ: ನವಯುಗ ಸಂಸ್ಥೆಯವರು ಕಳೆದ ಆರು ದಿನಗಳಿಂದ ಶುಲ್ಕದ ಹಗಲು ದರೋಡೆ ಮಾಡುತ್ತಿರುವುದರ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ಹಾಗೂ ಟ್ಯಾಕ್ಸಿ ಚಾಲಕರ ಸಂಘ ಪ್ರತಿಭಟನೆ ನಡೆಸಿದವು.
ಪ್ರತಿಭಟನೆಯಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಮಾತನಾಡಿ, ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವುದರಿಂದ ನಾವು ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈಗಾಗಲೇ 1,800 ಲಾರಿಗಳು ಮುಷ್ಕರದಲ್ಲಿ ಬಾಗವಹಿಸಿವೆ, ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರದೇ ಇದ್ದಲ್ಲಿ ಮೇ 11 ರಂದು ಸೇಲಂನಲ್ಲಿ  ದಕ್ಷಿಣ ಭಾರತ ಲಾರಿ ಮಾಲೀಕರ ಸಭೆ ನಡೆಲಿದ್ದು ನಂತರ ಮುಂದಿನ ಹೋರಾಟ ಕೈಗೊಳ್ಳಲಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ದಕ್ಷಿಣ ಭಾರತ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಎಸ್.ಪಿ. ವಿ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್  ಕುರಿತು ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಕೇಂದ್ರ ಭೂಸಾರಿಗೆ ಸಚಿವ ಆಸ್ಕರ್ ಫರ್ನಾಂಡೀಸ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ಶೇ.300ರಷ್ಟು ಹೆಚ್ಚಳದ ಬಗ್ಗೆ ಉಂಟಾದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ವಿಧಾನಸೌಧದಲ್ಲಿ ಶುಕ್ರವಾರ ಸಭೆ ನಡೆಸಿದರು.
ಟೋಲ್ ಕಡಿಮೆ ಮಾಡುವ ಬಗ್ಗೆ ಸಾಧ್ಯತಾ ವರದಿಯನ್ನು ಇನ್ನೆರಡು ದಿನದಲ್ಲಿ ಸಲ್ಲಿಸಬೇಕು ಎಂದು ಅವರು ಸೂಚಿಸಿದರು. ಮೇ 12ರಂದು ಮತ್ತೆ ಸಭೆ ಸೇರಿ ಅಗತ್ಯ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವಇತರೆ ಸಚಿವರ ಸಭೆಯಲ್ಲಿ ಅವರು ಭಾಗವಹಿಸಿದ್ದರು.

2 ದಿನದಲ್ಲಿ ವರದಿಗೆ ಸಚಿವ ಆಸ್ಕರ್ ಸೂಚನೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement