ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲು ಶಾಸಕ ನಾಗರಾಜ್ ತಾಕೀತು

Rashmi Kasaragodu
Updated On : 13 May 2014, 2:41 am

ಸೂಲಿಬೆಲೆ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಶಾಸಕ ಎನ್.ನಾಗರಾಜ್ ತಾಕೀತು ಮಾಡಿದ್ದಾರೆ.
ಸೂಲಿಬೆಲೆ ಹೋಬಳಿಯ ಗುಳ್ಳಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ನಡೆಯಲಿರುವ  ಚರಂಡಿ ಹಾಗೂ ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಹೊಸಕೋಟೆ ತಾಲೂಕಿನ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಸದ್ಯ ಲಭ್ಯ ಇರುವ ಯೋಜನೆಗಳಲ್ಲಿ ಅಗತ್ಯವಿರುವ ಕಡೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಯಾವುದೇ ಗ್ರಾಮದಲ್ಲಿ ಅನುಷ್ಠಾನವಾಗುವ ಯೋಜನೆಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ತಾಲೂಕಿನ ಇತರೆ ಹಳ್ಳಿಗಳಲ್ಲಿ ಹಂತ ಹಂತವಾಗಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪ್ರಸಾದ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ, ತಾಪಂ ಮಾಜಿ ಸದಸ್ಯ ಯರ್ರೇಗೌಡ ಮೊದಲಾದವರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement