ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಚನ್ನಮ್ಮ ವಸತಿ ಶಾಲೆಗೆ ನೂರಕ್ಕೆ ನೂರು

Rashmi Kasaragodu
Updated On : 13 May 2014, 2:41 am

ಸೂಲಿಬೆಲೆ: ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದ್ದಾರೆ.
41 ವಿದ್ಯಾರ್ಥಿಗಳಲ್ಲಿ ಮೂರು ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉರ್ತ್ತೀಣರಾಗಿದ್ದು, ಉಳಿದಂತೆ 28 ಮಂದಿ ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಹಾಗೂ 10 ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಮೇಘನಾ-558, ತೇಜಸ್ವಿನಿ 540, ಡಿ.ಸಿ ಭವ್ಯ-533 ಅಂಕ ಪಡೆದು ಉನ್ನತ ದರ್ಜೆಯಲ್ಲಿ ಉತ್ತೀಣರಾಗಿದ್ದಾರೆ ಎಂದು ಪ್ರಾಂಶುಪಾಲ ಕೆ.ವಿ ನಾಗರಾಜ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಿತ್ತೂರು ಚನ್ನಮ್ಮ ವಸತಿ ಶಾಲೆ, ದೇವನಹಳ್ಳಿ ತಾಲೂಕಿನ ಕುಂದಾಣ  ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಗೆಹಳ್ಳಿ ಮೊರಾರ್ಜಿ ಶಾಲೆಗಳು ಶೇ.100 ಫಲಿತಾಂಶ  ಪಡೆದುಕೊಂಡಿವೆ ಎಂದು ಪ್ರಾಂಶುಪಾಲ  ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement