ಮೊರಾರ್ಜಿ ಶಾಲೆ
ಸೂಲಿಬೆಲೆ: ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಪ್ರಾಂಶುಪಾಲ ಹನುಮಂತಪ್ಪ ತಿಳಿಸಿದ್ದಾರೆ.ಶಾಲೆಯಲ್ಲಿ ಒಟ್ಟು 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಇದರಲ್ಲಿ 4 ವಿದ್ಯಾರ್ಥಿಗಳು ಶೇ.90 ಕ್ಕಿಂತಲೂ ಹೆಚ್ಚು ಅಂಕಪಡೆದುಕೊಂಡಿದ್ದಾರೆ.ಇನ್ನೂಳಿದ 6 ವಿದ್ಯಾರ್ಥಿಗಳು ಶೇ.85ಕ್ಕಿಂತಲೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.