ಉತ್ತಮ ಕೆಲಸಕ್ಕೆ ಸಿಕ್ಕ ಗೌರವ: ಡಿಕೆಶಿ
ರಾಮನಗರ: ಹಿಂದಿನ ಸಂಸದರ ಕಾರ್ಯವೈಖರಿ ಸರಿ ಇಲ್ಲ ಎನ್ನುವ ಕಾರಣಕ್ಕೆ ಉಪ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನತೆ ಗೆಲ್ಲಿಸಿದ್ದರು.
ಸಿಕ್ಕ ಅವಕಾಶದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದನ್ನು ಗಮನಿಸಿ ಈಗ ಇನ್ನೂ ದೊಡ್ಡ ಅಂತರದಲ್ಲಿ ಗೆಲ್ಲಿಸಿದ್ದಾರೆ ಎಂದು ಫಲಿತಾಂಶವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಶ್ಲೇಷಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪ್ರಧಾನವಾಗುವ ವಿಷಯಗಳು ಬೇರೆಯೇ ಆಗಿರುತ್ತವೆ. ಕಾಂಗ್ರೆಸ್ ಪಕ್ಷವು ಜನತೆಯ ತೀರ್ಪಿಗೆ ತಲೆಬಾಗುತ್ತದೆ. ರಾಜ್ಯದಲ್ಲಿ ಪಕ್ಷದ ಹಿನ್ನಡೆಗೆ ಯಾರೊಬ್ಬರು ಕಾರಣರಲ್ಲ ಎಂದು ಹೇಳುವ ಮೂಲಕ ಅವರ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಯನ್ನು ಅಲ್ಲಗಳೆದಿದ್ದಾರೆ.
ಸೋಲಿನ ನೋವಿನಲ್ಲಿದ್ದಾರೆ: ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಹೋಗಿ 3ನೇ ಸ್ಥಾನಕ್ಕೆ ದೂಡಲ್ಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಪಾಪ ಅವರು ಸೋಲಿನ ನೋವಿನಲ್ಲಿದ್ದಾರೆ. ಅಂತಹವರ ಬಗ್ಗೆ ಮಾತನಾಡುವುದು ಸರಿಯಲ್ಲ. ಆ ಬಗ್ಗೆ ಅವರೇ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.