ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಅಪ್ಪ- ಮಕ್ಕಳ ಷಡ್ಯಂತ್ರದಿಂದ ಸೋಲು: ಬಚ್ಚೇಗೌಡ

Rashmi Kasaragodu
Updated On : 18 May 2014, 1:02 am

ಹೊಸಕೋಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಯವರ ಷಡ್ಯಂತ್ರ ತಮ್ಮ ಸೋಲಿಗೆ ಕಾರಣವಾಯಿತು ಎಂದು ಮಾಜಿ ಸಚಿವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಬಚ್ಚೇಗೌಡ ಸುದ್ದಿಗಾರರಿಗೆ ತಿಳಿಸಿದರು.
ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ವೀರಪ್ಪ ಮೊಯ್ಲಿ ನಡುವೆ ಒಳ ಒಪ್ಪಂದ ಮಾಡಿಕೊಂಡು ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಒಕ್ಕಲಿಗರ ಮತಗಳನ್ನು ವಿಭಜಿಸಲು ಸಂಚು ರೂಪಿಸಲಾಗಿತ್ತು. ಈ ಬಾರಿ ರಾಷ್ಚ್ರದಲ್ಲಿ ಬದಲಾವಣೆಗೊಳ್ಳುವ ನಿರೀಕ್ಷೆಯಿದ್ದರೂ ಸಹ  ಬಾಗೇಪಲ್ಲಿ, ಗೌರಿಬಿದನೂರಿನ ಮತದಾರರು ಮಾತ್ರ ನಿರ್ಲಿಪ್ತರಾದುದು ದುರ್ದೈವದ ಸಂಗತಿ.
ಇದರಿಂದ ಕ್ಷೇತ್ರದ ಜನತೆ ಅಭಿವೃದ್ಧಿಯಿಂದ ವಂಚಿತರಾಗುವ ಸಂಭವವಿದೆ. ಆದಾಗ್ಯೂ  ಜನಾದೇಶಕ್ಕೆ ತಲೆಬಾಗುವುದಾಗಿಯೂ,ಬಿಜೆಪಿ ಪಕ್ಷ, ನರೇಂದ್ರ ಮೋದಿ ನಾಯಕತ್ವ ಹಾಗೂ ತಮ್ಮ ಮೇಲೆ ವಿಶ್ವಾಸವಿಟ್ಟು ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ಕೃತಜ್ಞತೆಗಳನ್ನು, ರಾಷ್ಟ್ರದ 16ನೇ ಲೋಕಸಭೆಗೆ ನಿರೀಕ್ಷೆಗೂ ಮೀರಿ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡು ನರೇಂದ್ರ ಮೋದಿಯವರು ಪ್ರಧಾನಿಯಾಗುತ್ತಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ಹೊಸಕೋಟೆ ತಾಲೂಕಿನಲ್ಲಿ ಮತದಾರರು ತಮ್ಮ ಮೇಲೆ ಅಭಿಮಾನ ತೋರಿ 80060 ಮತಗಳನ್ನು ನೀಡಿರುವುದಕ್ಕೆ ಧನ್ಯವಾದಗಳನ್ನು  ಅರ್ಪಿಸಿದರು. ವಿಜೇತ ಅಭ್ಯರ್ಥಿ ವೀರಪ್ಪ ಮೊಯ್ಲಿ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡಲಿ, ಕುಮಾರಸ್ವಾಮಿಯವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement