ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ಗ್ರಾಮಾಂತರ

ಕುಡಿವ ನೀರು ಸಮರ್ಪಕವಾಗಿ ಒದಗಿಸಿ

Srinivasa Murthy VN
Updated On : 21 May 2014, 2:08 am

ನೆಲಮಂಗಲ: ಗ್ರಾಮಗಳಲ್ಲಿ ಕುಡಿಯುವ ನೀರನ್ನು ಜನತೆಗೆ ಸಮರ್ಪಕವಾಗಿ ಒದಗಿಸುವಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.
ಅವರು ಮಂಗಳವಾರ ಪಟ್ಟಣದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ತಾಲೂಕಿನಲ್ಲಿ ಸಮರ್ಪಕ ಮಳೆ ಬಾರದ ಕಾರಣ ಕುಡಿಯುವ ನೀರಿನ ಸಮಸ್ಯೆ ಗ್ರಾಮಗಳಲ್ಲಿ ಹೆಚ್ಚಾಗಿದ್ದು, ಅದನ್ನು ಪರಿಹರಿಸಲು ಹೆಚ್ಚಿನ ಆದ್ಯತೆ ಶ್ರಮ ಅಧಿಕಾರಿಗಳು ಪಡಬೇಕು. ಜನರಿಗೆ ಸರ್ಕಾರದ ಯೋಜನೆಗಳು ಸೌಲಭ್ಯಗಳನ್ನು ಕರಪತ್ರದ ಮೂಲಕ ಮನವರಿಕೆ ಮಾಡಬೇಕು ಎಂದರು.
ತಾಲೂಕಿನ ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ರಚಿಸಿ ಮಾಸಿಕ ಸಭೆ ನಡೆಸಿ ಜನರ ಅಭಿಪ್ರಾಯ ಕಂದು ಕೊರತೆ ಕುರಿತು ಮಾಹಿತಿಯನ್ನು ಪಿ.ಡಿ.ಓ ಗಳು ತಾಲೂಕು ಅಧಿಕಾರಿಗಳ ಗಮನಕ್ಕೆ ತರಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕಾರ್ಯ ನಿರ್ವಹಿಸಿ ಪ್ರತಿ ಮನೆಗೂ ಶೌಚಾಲಯ ನಿರ್ಮಿಸಿ ಬಯಲು ವಿಸರ್ಜನೆ ಮುಕ್ತ ತಾಲೂಕು ಆಗಿಸಬೇಕು ಎಂದು ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ ತಾ.ಪಂ.ಅಧ್ಯಕ್ಷೆ ಸರಸ್ವತಿ ಅಭಿಯಂತರ ರಾಮಮೋಹನ್ ಸೇರಿದಂತೆ ಎಲ್ಲಾ ಪಂಚಾಯ್ತಿ ಪಿ.ಡಿ.ಓಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement