ದೇವನಹಳ್ಳಿ ತಾಲೂಕಿನಲ್ಲಿ ಹೊಸದಾಗಿ 9 ಗ್ರಾಪಂ ಪುನರ್ವಿಂಗಡಣೆಗೆ ಒತ್ತಾಯ
ದೇವನಹಳ್ಳಿ: ತಾಲೂಕಿನಲ್ಲಿ ಹಾಲಿ 21 ಗ್ರಾಮ ಪಂಚಾಯಿತಿಗಳಿದ್ದು ಅವುಗಳಲ್ಲಿ ಹೆಚ್ಚು ಜನಸಂಖ್ಯೆ ಇರುವ 9 ಗ್ರಾಮ ಪಂಚಾಯಿತಿಗಳನ್ನು ಪುನರ್ವಿಂಗಡಣೆ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಿಗೆ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದ್ದಾರೆ.
ದೇವನಹಳ್ಳಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳಿಗೆ ಸೇರಿದ ಗ್ರಾಮಗಳು ಹಾಗೂ ಜನಸಂಖ್ಯೆ ಆಧಾರದ ಮೇಲೆ ಪುನರ್ವಿಂಗಡಣೆಯಾದರೆ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಅಲ್ಲದೇ ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಮೂಲಭೂತ ಸೌಲಭ್ಯಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಿಂದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕರು ತಿಳಿಸಿದ್ದಾರೆ.
ಶಾಸಕರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಾ.ಪಂ. ಉಪಾಧ್ಯಕ್ಷ ಪಟಾಲಪ್ಪ, ತಾ.ಪಂ. ಮಾಜಿ ಅಧ್ಯಕ್ಷರುಗಳಾದ ಬಿ.ಕೆ.ಶಿವಪ್ಪ, ಐ.ಎಸ್.ಆಂಜಿನಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಪ್ಪ, ಎಸ್.ಎಂ.ನಾರಾಯಣಸ್ವಾಮಿ, ಸುಬ್ಬೇಗೌಡ, ಕಗ್ಗಲಹಳ್ಳಿ ಗುರಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಮುನಿಶಾಮಯ್ಯ ಹಾಗೂ ಕಾರ್ಯದರ್ಶಿ ಜಿ.ಎ.ರವೀಂದ್ರ ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳಿಗೆ ಸೇರಿದ ಗ್ರಾಮಗಳು ಹಾಗೂ ಜನಸಂಖ್ಯೆ ಆಧಾರದ ಮೇಲೆ ಪುನರ್ವಿಂಗಡಣೆಯಾದರೆ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರು ಅಲ್ಲದೇ ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಮೂಲಭೂತ ಸೌಲಭ್ಯಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಿಂದ ಅಭಿವೃದ್ಧಿ ಹೊಂದಲು ಸಾಧ್ಯ
- ಪಿಳ್ಳಮುನಿಶಾಮಪ್ಪ, ಶಾಸಕ