ಕನಕಪುರದಲ್ಲಿ ಜಯಘೋಷ
ಕನಕಪುರ: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕನಕಪುರದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿಹಂಚಿ, ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು.
ಇಲ್ಲಿನ ಚನ್ನಬಸಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾಗರಾಜು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೇರಿ ವಿಜಯೋತ್ಸವ ಆಚರಿಸಿದರು. ಸಾರ್ವಜನಿಕರ ಅನುಕೂಲತೆಗಾಗಿ ಪದವಿ ಪ್ರಧಾನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಹಲವಾರು ಟಿವಿ ಪರದೆಗಳನ್ನು ಇರಿಸಲಾಗಿತ್ತು. ಸಾವಿರಾರು ಜನರು ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಂದರ್ಭವನ್ನು ನೇರವಾಗಿ ವೀಕ್ಷಿಸಲು ಅನುಕೂಲವಾಯಿತು.
ಕನಕಪುರದ ಬಿಜೆಪಿ ಕಾರ್ಯಕರ್ತರು ಇಂದು ಬೆಳಗ್ಗೆ ಕಲ್ಲಹಳ್ಳಿಯ ಶ್ರೀನಿವಾಸ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ, ಅರ್ಚನೆ,ಅಭಿಷೇಕಗಳನ್ನು ಸಲ್ಲಿಸಿ ಮೋದಿಯವರಿಗೆ ಯಶಸ್ಸನ್ನು ಹಾರೈಸಿದರು. ಜಿಲ್ಲಾಧ್ಯಕ್ಷ ಬಿ.ನಾಗರಾಜು ಮಾತನಾಡಿದರು.
ಬಿಜೆಪಿ ಮುಖಂಡರುಗಳಾದ ತಾಲೂಕು ಅಧ್ಯಕ್ಷ ಜಗನ್ನಾಥ್, ತಾಲೂಕು ಪ್ರಧಾನ ಕಾರ್ಯದರ್ಶಿ ನಾಗಾನಂದ, ರೈತಮೋರ್ಚಾ ಅಧ್ಯಕ್ಷ ರಾಜೇಶ್, ತುಂಗಣಿ ಅರಸು, ಡಿ. ಶ್ರೀನಿವಾಸ್, ರವೀಂದ್ರಬಾಬು, ಆನಂದ, ಸ್ವಾಮಿ, ಮನು ಪಾಲ್ಗೊಂಡಿದ್ದರು.