ಹಳೇವೂರು ದೇಗುಲದಲ್ಲಿ ಕಳವು
ಸೂಲಿಬೆಲೆ: ಹೊಸಕೋಟೆ ತಾಲೂಕಿನ ಹಳೇವೂರು ಗ್ರಾಮದಲ್ಲಿರುವ ಪ್ಲೇಗಮ್ಮ ದೇಗುಲದಲ್ಲಿ ಭಾನುವಾರ ರಾತ್ರಿ ದುಷ್ಕರ್ಮಿಗಳು ದೇಗುಲದ ಹುಂಡಿಯನ್ನು ಕದ್ದುಕೊಂಡು ಹೋಗಿರುವ ಘಟನೆ ನಡೆದಿದೆ. ಗ್ರಾಮದಲ್ಲಿರುವ ಪ್ಲೇಗಮ್ಮ ದೇಗುಲದಲ್ಲಿ ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಸಲಾಗುತ್ತದೆ. ಮೇ 5ರಂದು ಜಾತ್ರೆ ನಡೆದಿತ್ತು. ಈ ವೇಳೆ ಅಪಾರ ಸಂಖ್ಯೆಯ ಭಕ್ತರು ದೇವರಿಗೆ ಹುಂಡಿಯಲ್ಲಿ ಕಾಣಿಕೆ ಹಾಕಿದ್ದರು.ಇದನ್ನು ಗಮನಿಸಿರುವ ದುಷ್ಕರ್ಮಿಗಳು ದೇಗುಲ ಬಾಗಿಲು ಮೀಟಿ ಹುಂಡಿಯನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.