'ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಸಂತಸ'
ನೆಲಮಂಗಲ: ಅಭಿವೃದ್ಧಿಯ ದೃಷ್ಟಿಯಿಂದ ರಾಷ್ಟ್ರದ ಜನತೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿ ಬಿಜೆಪಿ ಅಧಿಕಾರಕ್ಕೆ ತಂದಿರುವುದು ಅತ್ಯಂತ ಸಂತೋಷದಾಯಕ ಸಂಗತಿ ಎಂದು ಮಾಜಿ ಶಾಸಕ ನಾಗರಾಜು ಹೇಳಿದರು.
ಅವರು ಮಂಗಳವಾರ ಪಟ್ಟಣದಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಿದ್ದಕ್ಕೆ ಮೆರವಣಿಗೆ ಮೂಲಕ ವಿಜಯೋತ್ಸವ ಆಚರಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ತಾಲೂಕು ಕಾರ್ಯಕರ್ತರನ್ನು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಆದಂತಹ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳು ಈಗಿನ ಸರ್ಕಾರ ನಿರ್ವಹಿಸುವಲ್ಲಿ ವಿಫಲವಾಗಿದೆ. ತಾಲೂಕಿನಲ್ಲೂ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ ಎಂದು ದೂರಿದರು. ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್ ಪ್ರಸಾದ್, ಮುಖಂಡರಾದ ಬಾಳೇಕಾಯಿ ನಾಗರಾಜು, ಸತೀಶ್, ರಾಜಮ್ಮ, ಸೌಮ್ಯ, ಬೈರೇಗೌಡ, ಲಕ್ಷ್ಮೀನಾರಾಯಣ್, ಕೇಶವಮೂರ್ತಿ ಸೇರಿದಂತೆ ನೂರಾರು ಜನ ಇದ್ದರು.