ಬೆಂಗಳೂರು: ಪಿತ್ತಕೋಶದಲ್ಲಿ ಕಲ್ಲು ಬೆಳೆದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಗುರುವಾರ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಂ ರಸ್ತೆಯಲ್ಲಿರುವ ವಿಕ್ರಂ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ಆರೋಗ್ಯ ಸ್ಥಿರವಾಗಿದೆ. ರಕ್ತದೊತ್ತಡ, ಮಧುಮೇಹ ನಿಯಂತ್ರಣದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.