ಎಬಿವಿಪಿ ಪ್ರತಿಭಟನೆ: ಲಘು ಲಾಠಿಪ್ರಹಾರ
ಬಳ್ಳಾರಿ: ನಗರದ ನಳಂದ ಕಾಲೇಜಿನ ವಿದ್ಯಾರ್ಥಿ ಕೃಷ್ಣಮೂರ್ತಿ ಆತ್ಮಹತ್ಯೆ ಪ್ರಕರಣ ಖಂಡಿಸಿ ಎಬಿವಿಪಿ ಶುಕ್ರವಾರ ಶಾಲಾ-ಕಾಲೇಜು ಬಂದ್ಗೆ ಕರೆ ನೀಡಿತ್ತು. ಬಂದ್ ಕರೆಗೆ ಸ್ಪಂದಿಸದ ನಂದಿ ಶಾಲೆ ಮೇಲೆ ಎಬಿವಿಪಿ ಕಾರ್ಯಕರ್ತರು ಕಲ್ಲು ತೂರಿದ್ದರಿಂದ, ವಿಕೋಪಕ್ಕೆ ತೆರಳಿದ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಲಾಠಿ ಪ್ರಹಾರದ ವೇಳೆ ಎಬಿವಿಪಿ ಕಾರ್ಯಕರ್ತರಿಗೆ ಹಾಗೂ ಪೊಲೀಸ್ ಪೇದೆಯೊಬ್ಬನಿಗೆ ಗಾಯವಾಗಿದೆ. 9 ಎಬಿವಿಪಿ ಕಾರ್ಯಕರ್ತರ ವಿರುದ್ಧ ದೂರ ದಾಖಲಿಸಿ, ಬಂಧಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಎಬಿವಿಪಿಯ ಅಡವಿಸ್ವಾಮಿಗೆ ಹಾಗೂ ಪೊಲೀಸ್ ಪೇದೆ ದೇವೇಂದ್ರಪ್ಪ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂದ್ ವೇಳೆ ಪೊಲೀಸರು ಅನಗತ್ಯವಾಗಿ ಲಾಠಿಚಾರ್ಜ್ ನಡೆಸಿದ್ದು, ಕಾರ್ಯಕರ್ತರನ್ನು ಪೊಲೀಸರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ನಂದಿ ಶಾಲೆಗೆ ಕಲ್ಲು ತೂರಿದ ಹಿನ್ನೆಲೆಯಲ್ಲಿ ಗುಂಪು ಚದರಿಸಲು ಪೊಲೀಸರು ಮುಂದಾದರೇ ಹೊರತು ಯಾರ ಮೇಲೂ ಲಾಠಿಜಾರ್ಜ್ ಮಾಡಿಲ್ಲ. ಘಟನೆಯಲ್ಲಿ ಪೊಲೀಸ್ ಪೇದೆಗೆ ಗಾಯವಾಗಿದೆ. ಇದರಿಂದ ಪ್ರತಿಭಟನಾನಿರತ 9 ಮಂದಿಯನ್ನು ಬಂಧಿಸಲಾಗಿದೆ ಎಂದು ಡಿವೈಎಸ್ಪಿ ಮುರುಗಣ್ಣನವರ್ ತಿಳಿಸಿದರು. ಜಾರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.