ಸಿದ್ದರಾಮಯ್ಯ ಏಕೆ ಅರ್ಜಿ ಸಲ್ಲಿಸಿಲ್ಲ?
ಬೆಂಗಳೂರು: ಚುನಾವಣಾ ಸಮಿತಿ ಸಭೆಗೆ ದಿನಾಂಕ ನಿಗದಿ ಮಾಡುತ್ತಿರುವ ಸಂದರ್ಭದಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಏಕೆ ಕೆಪಿಸಿಸಿಗೆ ಅರ್ಜಿ ಸಲ್ಲಿಸಿಲ್ಲ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ. ವಿರೋಧಿ ಬಣದವರ ಪ್ರಕಾರ, ಅವರಿಗೆ ಕಾಂಗ್ರೆಸ್ನ ಈ ಬಗೆಯ ನಿಯಮ ಇಷ್ಟವಾಗುವುದಿಲ್ಲ. ಹೇಗೂ ಟಿಕೆಟ್ ಖಾತರಿ ಇರುವುದರಿಂದ ಅರ್ಜಿ ಸಲ್ಲಿಸಿ 10 ಸಾವಿರ ಏಕೆ ನಷ್ಟ ಮಾಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡುತ್ತಿದ್ದಾರೆ. ಇನ್ನು ಕೆಲವರ ಪ್ರಕಾರ, ಅವರು ಎರಡು ಕ್ಷೇತ್ರಗಳತ್ತ ನೋಡುತ್ತಿದ್ದಾರೆ. ವರುಣಾ ಕ್ಷೇತ್ರದಲ್ಲಿ ಕಾಪು ಸಿದ್ದಲಿಂಗಸ್ವಾಮಿಯವರಂಥ ಬದ್ಧತೆ ಇಲ್ಲದ ವ್ಯಕ್ತಿಗಳು ಸ್ಪರ್ಧಿಸಿದರೆ ಅವರು ಬೇರೆ ಕ್ಷೇತ್ರದತ್ತ ದೃಷ್ಟಿ ಹರಿಸಬಹುದು ಎಂಬ ಮಾತು ಕೇಳಿ ಬರುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.