ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ಮುಸ್ಲಿಮರಿಗೂ ಬಾಲ್ಯವಿವಾಹ ನಿಷೇಧ ಅನ್ವಯ

ಮುಸ್ಲಿಂ ಸಮುದಾಯಕ್ಕೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯವಾಗುತ್ತದೆ.

Parashurama
Updated On : 27 Feb 2013, 12:30 pm

ಬೆಂಗಳೂರು: ಮುಸ್ಲಿಂ ಸಮುದಾಯಕ್ಕೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯವಾಗುತ್ತದೆ. ಯಾವುದೇ ಧರ್ಮದ ನಿಯಮಗಳು ಸಾಂವಿಧಾನಿಕ ನಿಯಮಗಳಿಗಿಂತ ದೊಡ್ಡದಲ್ಲ ಎಂದು ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ಮಹತ್ವದ ಆದೇಶ ನೀಡಿದೆ.
ಇಸ್ಲಾಂ ನಿಯಮದ ಪ್ರಕಾರ ಪ್ರೌಢಾವಸ್ಥೆಗೆ ತಲುಪಿರುವ ತನ್ನ ವಿವಾಹಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ 16ವರ್ಷದ ಸೀಮಾ ಬೇಗಂ ಎಂಬುವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿರುವ ನ್ಯಾ. ಅಶೋಕ್ ಬಿ. ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಬಾಲ್ಯ ವಿವಾಹ ನಿಷೇಧ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ. ಇದನ್ನು ಯಾವುದೇ ಧರ್ಮದ ಜನರು ಉಲ್ಲಂಘಿಸಲಾಗದು. ವೈಯಕ್ತಿಕ ಧರ್ಮ, ನೀತಿ ನಿಯಮಗಳು ಸಾಂವಿಧಾನಿಕ ಧರ್ಮವನ್ನು ಮೀರಿದ್ದಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಇಸ್ಲಾಂ ಕಾನೂನಿನ ಪ್ರಕಾರ, ಯಾವುದೇ ವ್ಯಕ್ತಿ ಮಾನಸಿಕವಾಗಿ ಸ್ವಸ್ಥನಾಗಿದ್ದು, ಪ್ರೌಢಾವಸ್ಥೆ ತಲುಪಿದ ಕೂಡಲೇ ವಿವಾಹವಾಗುವ ಹಕ್ಕು ದೊರಕುತ್ತದೆ ಎಂಬ ಅರ್ಜಿದಾರರ ವಾದವನ್ನು ಸಾರಾಸಗಟಾಗಿ ತಳ್ಳಿ ಹಾಕಿರುವ ಪೀಠ, ಇಸ್ಲಾಂ ಧರ್ಮದ ಪ್ರತಿಯೊಬ್ಬ ವ್ಯಕ್ತಿ ಕೂಡ ಸಾಂವಿಧಾನಿಕ ನೀತಿ ನಿಬಂಧನೆಗಳಿಗೆ ಒಳಪಡುತ್ತಾನೆ ಎಂದು ಸ್ಪಷ್ಟಪಡಿಸಿದೆ.
ಅಪರಾಧಕ್ಕೆ ಬೆಂಬಲ: ಅರ್ಜಿದಾರರ ಕೋರಿಕೆಯನ್ನು ವಿರೋಧಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೆ.ಎಂ.ನಟರಾಜ್, ಸಂವಿಧಾನದ ನಿಯಮದ ಪ್ರಕಾರ, ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಇದೀಗ ಅಪ್ರಾಪ್ತ ವಯಸ್ಸಿನಲ್ಲಿ ವಿವಾಹಕ್ಕೆ ಅವಕಾಶ ಕಲ್ಪಿಸಿದಲ್ಲಿ ಅಪರಾಧ ಎಸಗಲು ಧರ್ಮವೇ ಬೆಂಬಲ ನೀಡಿದಂತಾಗುತ್ತದೆ ಎಂದು ಆಕ್ಷೇಪಿಸಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಸಮಾಜದ ಪ್ರತಿ ವರ್ಗಕ್ಕೂ ಅನ್ವಯವಾಗುತ್ತದೆ. ಇದರಿಂದ ಯಾವುದೇ ಧರ್ಮ ಹೊರಗುಳಿಯಲು ಸಾಧ್ಯವಿಲ್ಲ ಎಂಬ ವಾದ ಪರಿಗಣಿಸಿದ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments