ಇಂದು ಧರ್ಮಸ್ಥಳಕ್ಕೆ ಪಾದಯಾತ್ರೆ
ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಫೆ.28ರಂದು ಮಹಾಲಕ್ಷ್ಮೀ ಬಡಾವಣೆಯ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಿಂದ ಬೆಂಗಳೂರಿನಿಂದ ಧರ್ಮಸ್ಥಳದವರೆಗೆ ಹಲವು ಭಕ್ತರು ಪಾದಯಾತ್ರೆ ತೆರಳಲಿದ್ದಾರೆ. ಬೆಳಗ್ಗೆ 10.30ಕ್ಕೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ, ಹನುಮಂತಪ್ಪ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ದಾನಿಗಳಿಂದ ಹಾಗೂ ಹಿತೈಷಿಗಳಿಂದ ಬೀಳ್ಕೊಡಲಿದ್ದಾರೆ.
ಪಾದಯಾತ್ರೆಯಿಂದ ದೇಹದಂಡನೆಯಾಗುತ್ತದೆ. ನಿರಂತರ ನಡಿಗೆಯಿಂದ ಹಾಗೂ ಭಜನೆ, ಪೂಜೆ, ಧ್ಯಾನದಲ್ಲಿ ನಿರತರಾಗುವುದರಿಂದ ಸತ್ಸಂಗ ದೊರೆತಂತಾಗುತ್ತದೆ. ದುರಾಲೋಚನೆ ದೂರವಾಗಿ ಮನಸ್ಸು ನಿರ್ಮಲವಾಗುತ್ತದೆ ಎಂಬುದು ಭಕ್ತರ ನಂಬಿಕೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.