ಇಂದು ರಾಜಭವನದೆದುರು 24 ಗಂಟೆ ಮಲಗಿ ಪ್ರತಿಭಟನೆ
ಬೆಂಗಳೂರು: ಕಾವೇರಿ ನಿರ್ವಹಣಾ ಸಮಿತಿ ರಚನೆ ಮಾಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಕನ್ನಡ ಸಂಘಟನೆಗಳ ಮುಖಂಡರು ಕನ್ನಡ ಒಕ್ಕೂಟ ಅಧ್ಯಕ್ಷರಾದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಗುರುವಾರ ರಾಜಭವನದ ಮುಂದೆ ಹಗಲು-ರಾತ್ರಿ (24 ಗಂಟೆ) ಮಲಗಿ ಪ್ರತಿಭಟನೆ ನಡೆಸಲಿದ್ದಾರೆ. ವಾಟಾಳ್ ನಾಗರಾಜ್ ಅವರೊಂದಿಗೆ ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕಾರ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡಪರ ಹೋರಾಟಗಾರ ಜಿ. ಮುದ್ದೇಗೌಡ ಸೇರಿದಂತೆ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.