ಒಣ ಕೊಳವೆಬಾವಿ ಮುಚ್ಚಲು ಆದೇಶ: ಸರ್ಕಾರದ ಹೇಳಿಕೆ
ಬೆಂಗಳೂರು: ರಾಜ್ಯದಲ್ಲಿ ತೆರೆದ ಕೊಳವೆ ಬಾವಿಗಳಿಗೆ ಬಿದ್ದು ಮಕ್ಕಳು ಮೃತಪಡುವುದನ್ನು ತಪ್ಪಿಸಲು ಕ್ರಮ ತೆಗೆದುಕೊಂಡಿದ್ದು, ಎಲ್ಲೆಡೆ ಕೊಳವೆ ಬಾವಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. 2009ರಲ್ಲಿ ಬಿಜಾಪುರ ಜಿಲ್ಲೆಯಲ್ಲಿ ಕೊಳವೆ ಬಾವಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಲ್ಲಿ ಈ ಹೇಳಿಕೆ ನೀಡಿದೆ. ರಾಜ್ಯದಲ್ಲಿ ಒಣ ಕೊಳವೆ ಬಾವಿಗಳ ನಿರ್ವಹಣೆಗೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಸರ್ಕಾರಿ ವಕೀಲರು ನೀಡಿದ ಹೇಳಿಕೆ ಪರಿಗಣಿಸಿದ ಹಂಗಾಮಿ ಮುಖ್ಯ ನ್ಯಾ.ಶ್ರೀಧರ್ರಾವ್ ಹಾಗೂ ನ್ಯಾ.ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.