ಕಿರು ವಿದ್ಯುತ್ಗೆ ಅನುಮತಿ ಇಲ್ಲ
ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಇನ್ನು ಮುಂದೆ ಯಾವುದೇ ಕಿರುವಿದ್ಯುತ್ ಯೋಜನೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟಪಡಿಸಿದೆ. ಈ ಹೇಳಿಕೆಯನ್ನು ಪರಿಗಣಿಸಿರುವ ಹಂಗಾಮಿ ಮುಖ್ಯ ನ್ಯಾ.ಶ್ರೀಧರ್ರಾವ್ ಹಾಗೂ ನ್ಯಾ. ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠ, ಅರ್ಜಿ ಇತ್ಯರ್ಥಗೊಳಿಸಿದೆ. ಪಶ್ಚಿಮಘಟ್ಟದಲ್ಲಿ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಮಾರುತಿ ಪವರ್ ಝೆನ್ ಸಂಸ್ಥೆ ಕಿರುವಿದ್ಯುತ್ ಯೋಜನೆ ಸ್ಥಾಪಿಸಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಪ್ರತಿಕ್ರಿಯೆ ನೀಡಿದ ಸರ್ಕಾರ, ಈಗಾಗಲೇ ನಿಯಮಬಾಹಿರವಾಗಿರುವ 10 ಯೋಜನೆಗಳ ಅನುಮತಿ ರದ್ದುಗೊಳಿಸಲಾಗಿದೆ. ಅದರಲ್ಲಿ ಕೇವಲ ಒಂದು ಸಂಸ್ಥೆಗೆ ಮಾತ್ರ ಹೊಸದಾಗಿ ಅನುಮತಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಇನ್ನು ಯಾವುದೇ ಯೋಜನೆಗಳಿಗೆ ಅನುಮತಿ ನೀಡಲ್ಲ ಎಂದು ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.