ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ಬೈಕ್‌ಗಳ ಡಿಕ್ಕಿ; ಯುವಕ ಸಾವು

Parashurama
Updated On : 28 Feb 2013, 12:28 pm

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿಯಾಗಿ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ರಾಬಿನ್‌ಕುಮಾರ್ (24) ಮೃತರು. ಅದೇ ವಾಹನದಲ್ಲಿದ್ದ ದಿವಾಕರ್ ಹಾಗೂ ಮತ್ತೊಂದು ದ್ವಿಚಕ್ರ ವಾಹನ ಸವಾರ ಫಕ್ರುದ್ದೀನ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿ.ಕೆ. ಪಾಳ್ಯ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ರಾಬಿನ್‌ಕುಮಾರ್ ತನ್ನ ಸ್ನೇಹಿತ ದಿವಾಕರ್ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಫಕ್ರುದ್ದೀನ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಹಿಂಬದಿಯಿಂದ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ತಕ್ಷಣ ಮೂವರನ್ನೂ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ರಾಬಿನ್‌ಕುಮಾರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮಹಿಳೆ ಸಾವು: ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಡಾ. ರಾಜ್‌ಕುಮಾರ್ ಸಮಾಧಿ ಬಳಿ ಬುಧವಾರ ಬೆಳಗ್ಗೆ ಲಾರಿ ಡಿಕ್ಕಿಯಾಗಿ 35 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಗುರುತು ಪತ್ತೆಯಾಗಿಲ್ಲ. ಮೃತದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಇಡಲಾಗಿದ್ದು, ವಾರಸುದಾರರು ಸಂಬಂಧಪಟ್ಟ ಠಾಣೆ ಪೊಲೀಸರನ್ನು ಸಂಪರ್ಕಿಸಬಹುದು. ಮೃತ ಮಹಿಳೆ ಕೂಲಿ ಕೆಲಸ ಕಾರ್ಮಿಕರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments