ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

'ಮನೋಸ್ಥೈರ್ಯದಿಂದ ಆತ್ಮಹತ್ಯೆ ದೂರವಿಡಿ'

Parashurama
Updated On : 28 Feb 2013, 1:14 am

ಬೆಂಗಳೂರು: ವಿದ್ಯಾರ್ಥಿಗಳು ಮನೋಸ್ಥೈರ್ಯ ರೂಢಿಸಿಕೊಳ್ಳುವ ಮೂಲಕ ಆತ್ಮಹತ್ಯೆಯಂತಹ ಕೃತ್ಯಗಳಿಂದ ದೂರವಿರಬೇಕು ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದಜಿ ಮಹಾರಾಜ್ ಹೇಳಿದ್ದಾರೆ.
ರಾಜರಾಜೇಶ್ವರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯದ ಕೊರತೆ ಅವರನ್ನು ಆತ್ಮಹತ್ಯೆಯಂತಹ ಕೃತ್ಯಗಳಿಗೆ ಪ್ರೇರೇಪಿಸುತ್ತಿದೆ. ಅಂತಹ ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆತ್ಮಸ್ಥೈರ್ಯ ಮೂಡಲು ಸಾಧ್ಯ ಎಂದರು.
ಸಣ್ಣ ಸಣ್ಣ ವಿಚಾರಗಳಿಗೂ ಆತ್ಮಹತ್ಯೆ ಪರಿಪಾಠ ಹೆಚ್ಚಾಗುತ್ತಿದೆ. ಇದೇ ವಿಚಾರ ಬೆಂಗಳೂರು ನಗರದ ಹೆಸರನ್ನು ಆತ್ಮಹತ್ಯೆಗಳ ನಗರಿ ಎಂಬ ಕುಖ್ಯಾತಿಗೆ ತಳ್ಳುತ್ತಿದೆ. ಆದ್ದರಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ ಮೂಡಿಸಿ ಅವರನ್ನು ಧೈರ್ಯವಂತರನ್ನಾಗಿ ಮಾಡಲು ಪೋಷಕರು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಇದೇ ವೇಳೆ ರಾಜರಾಜೇಶ್ವರಿ ನಗರದ ಉದ್ಯಾನಕ್ಕೆ ಸ್ವಾಮಿ ವಿವೇಕಾನಂದರ ಹೆಸರನ್ನು ನಾಮಕರಣ ಮಾಡಲಾಯಿತು. ಬಳಿಕ ಅಲ್ಲಿನ ವಿವಿಧ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಯಿತು. ಬಿಬಿಎಂಪಿ ಸದಸ್ಯ ಎಚ್.ಜಿ. ರಾಮಚಂದ್ರಪ್ಪ, ಶಿಕ್ಷಣಾಧಿಕಾರಿ ಕೆಂಪಯ್ಯ ಹಾಜರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಜಯೇಂದ್ರಪುರಿ ಮಹಾಸ್ವಾಮಿಗಳು ವಿವೇಕಾನಂದರ ಚಿಂತನೆಗಳ ಕುರಿತ ಚರ್ಚಾ ಸ್ಪರ್ಧೆ, ವಿವೇಕಾನಂದರ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments