ಮಾ. 5ರಿಂದ ಸಂದರ್ಶನ
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ 180 ಸಹಾಯಕ ಸಿವಿಲ್ ಎಂಜಿನಿಯರ್ ಹುದ್ದೆಗಳ ಸಂದರ್ಶನ ಮಾ.5ರಿಂದ ಮಾ.8ರವರೆಗೆ ನಡೆಯಲಿದೆ. ಕರ್ನಾಟಕ ಲೋಕಸೇವಾ ಆಯೋಗದ ಕೇಂದ್ರ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 9.30ರಿಂದ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ವೆಬ್ತಾಣದಲ್ಲಿ ಪ್ರಕಟಿಸಲಾಗಿದೆ. ಸಂದರ್ಶನದ ಸೂಚನಾ ಪತ್ರವು ಅಭ್ಯರ್ಥಿಗಳಿಗೆ ದೊರಕದಿದ್ದರೆ ಕೂಡಲೇ ಕೇಂದ್ರ ಕಚೇರಿ ಸಂಪರ್ಕಿಸುವಂತೆ ಆಯೋಗದ ಕಾರ್ಯದರ್ಶಿ ಕೆ.ಆರ್.ಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.