ಬೆಂಗಳೂರು ನಗರ

ಡಿಜಿಟಲ್ ಜಾರಿ ಅರ್ಜಿ: ಪರಿಶೀಲಿಸಲು ಹೈ ಆದೇಶ

ಬೆಂಗಳೂರು: ಕೇಬಲ್ ಆಪರೇಟರ್‌ಗಳಿಗೆ ಡಿಜಿಟಲ್ ವ್ಯವಸ್ಥೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಮೈಸೂರು ನಗರದಲ್ಲಿ ಜಾರಿಗೆ ತರಲು ಆರು ತಿಂಗಳ ಕಾಲಾವಕಾಶ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಪರಿಶೀಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಮೈಸೂರು ಕೇಬಲ್ ಆಪರೇಟರ್‌ಗಳ ಸಂಘ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಕೇಬಲ್ ವ್ಯವಸ್ಥೆಯ ಬದಲಿಗೆ ಡಿಜಿಟಲ್ ವ್ಯವಸ್ಥೆ ಕಡ್ಡಾಯಗೊಳಿಸಿ ಕೇಂದ್ರ 2011ರ ನ.11ರಂದು ಆದೇಶ ಹೊರಡಿಸಿದೆ. ಈ ಯೋಜನೆ 3 ಹಂತಗಳಲ್ಲಿ ಜಾರಿಯಾಗಲಿದೆ. ಮೈಸೂರು ನಗರ ಎರಡನೇ ಹಂತದಲ್ಲಿ ಸೇರ್ಪಡೆಗೊಂಡಿದೆ. ಆದರೆ, ಮೈಸೂರಲ್ಲಿ 1 ದಶಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯಿರುವ ಹಿನ್ನೆಲೆಯಲ್ಲಿ, ಅದು 3ನೇ ಹಂತಕ್ಕೆ ಸೇರ್ಪಡೆಗೊಳ್ಳುತ್ತದೆ. ಅದರ ಪ್ರಕಾರ, ತಮಗೆ ಕೇಬಲ್ ಡಿಜಿಟಲೀಕರಣಕ್ಕೆ 2014ರ ನ.30ರವರೆಗೆ ಅವಕಾಶ ಕಲ್ಪಿಸಬೇಕು ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಅಲ್ಲದೆ, ಕೇಂದ್ರದ ಆದೇಶದ ಪ್ರಕಾರ, 2013ರ ಮಾರ್ಚ್ 30ರೊಳಗೆ ಕೇಬಲ್‌ಗಳನ್ನು ಡಿಜಿಟಲೀಕರಣಗೊಳಿಸಬೇಕಿದೆ. ಆದರೆ, ಅದಕ್ಕೆ ಸೂಕ್ತ ವ್ಯವಸ್ಥೆ ಹಾಗೂ ತಯಾರಿ ಪೂರ್ಣಗೊಂಡಿಲ್ಲ. ಆದ್ದರಿಂದ ಆದೇಶ ಪಾಲನೆಗೆ ತಮಗೆ ಆರು ತಿಂಗಳ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಸಂಘ ಕೋರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ