36 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿ ಲೋಕಾರ್ಪಣೆ
ನೆಲಮಂಗಲ: ಬೆಂಗಳೂರು - ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ಅಡಕಿಮಾರನಹಳ್ಳಿ ಗ್ರಾಮದಲ್ಲಿ ಬೃಹತ್ ಏಕಶಿಲಾ 36 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿ ಹಾಗೂ ದೇವಾಲಯವನ್ನು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಉದ್ಘಾಟಿಸಿ ಲೋಕಾರ್ಪಣೆ ಮಾಡಿದರು.
ಈ ಬೃಹತ್ ಆಂಜನೇಯಸ್ವಾಮಿ ವಿಗ್ರಹವನ್ನು 6 ಕೋಟಿ ರುಪಾಯಿ ವೆಚ್ಚದಲ್ಲಿ ಶ್ರೀ ಮಾರುತಿ ಸಾಯಿಧಾಮ ಟ್ರಸ್ಟ್ ವತಿಯಿಂದ ಸುಮಾರು 27 ಸಾವಿರ ಚದರ ಅಡಿಗಳ ವಿಸ್ತೀರ್ಣ ದಲ್ಲಿ ನಿರ್ಮಿಸಲಾಗಿದೆ. ಇದೇ ದೇವಸ್ಥಾನದಲ್ಲಿ ಸಾಯಿಭಗವಾನ್, ಸಂತೋಷಿ ಮಾ, ಹನುಮಾನ್ ಜೀ, ನವಗ್ರಹ ಮೂರ್ತಿಗಳು, ಧ್ಯಾನ ಮಂದಿರ ಮತ್ತು ಪೂಜಾ ಮಂದಿರಗಳನ್ನು ನಿರ್ಮಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಜುಗರಾಜ್ ಸೋಲಂಕಿ ತಿಳಿಸಿದರು.
ಪಠನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಬಸವಧರ್ಮ ಜ್ಞಾನಪೀಠ ಮತ್ತು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಮಾತನಾಡಿ ಟ್ರಸ್ಟ್ನ ಮದನ್ಲಾಲ್ ಸೋಲಂಕಿ, ಬಾಬುಲಾಲ್ ರಾಯಿಸಾನಿ, ಮುಖೇಶ್, ಮೆಹತ, ಚಂದ್ರ, ಸೇರಿದಂತೆ ನೂರಾರು ದಾನಿಗಳ ಸಹಕಾರದಿಂದ ಭವ್ಯ ದೇಗುಲ ಸಾಕಾರಗೊಂಡಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.