ವಾಹನ ಡಿಕ್ಕಿ; ಯುವಕ ಸಾವು
ಬೆಂಗಳೂರು: ಭಾನುವಾರ ಮಧ್ಯಾಹ್ನ ಸರ್ಜಾಪುರ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಪುನೀತ್ ಜೈನ್ ಎಂಬಾತ ಮೃತಪಟ್ಟಿದ್ದಾನೆ. ವಾಹನದಲ್ಲಿದ್ದ ಆತನ ಸಹೋದರ ಸುನೀತ್ (27) ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ. ಬಿಳೇಕಳ್ಳಿ ಪುನೀತ್ ಜೈನ್ ಮತ್ತು ಸುನೀತ್ ವೈಟ್ಫೀಲ್ಡ್ ಸಮೀಪದ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ಮಧ್ಯಾಹ್ನ ಮಡಿವಾಳದಲ್ಲಿರುವ ಸ್ನೇಹಿತನ ಮನೆಗೆ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಸ್ಥಳಕ್ಕಾಗಮಿಸಿದ ಮಡಿವಾಳ ಸಂಚಾರ ಠಾಣೆ ಪೊಲೀಸರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.