ಗೋದಾಮಿಗೆ ಬೆಂಕಿ; ಅಪಾರ ನಷ್ಟ
ಬೆಂಗಳೂರು: ಚಾಮರಾಜಪೇಟೆ ಮೂರನೇ ಮುಖ್ಯರಸ್ತೆಯಲ್ಲಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಮಂಗಳವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದೆ. ಶಾರ್ಟ್ಸರ್ಕ್ಯೂಟ್ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು, ತಕ್ಷಣ 4 ವಾಹನಗಳಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು 4 ಗಂಟೆ ಹರಸಾಹಸ ಮಾಡಿ ಬೆಂಕಿ ನಂದಿಸಿದರು. ಅನಾಹುತದಿಂದ ಗೋದಾಮಿನಲ್ಲಿದ್ದ ಪ್ಲಾಸ್ಟಿಕ್ ತುಂಬಿದ್ದ 3 ಲಾರಿ, ಬಾಟಲ್ಗಳು ಬೆಂಕಿಗಾಹುತಿಯಾಗಿದ್ದು, ಘಟನೆಯಿಂದ ಲಕ್ಷಾಂತರ ರುಪಾಯಿ ಮೌಲ್ಯದ ನಷ್ಟವಾಗಿದೆ ಎಂದು ಗೋದಾಮಿನ ಮಾಲೀಕರು ತಿಳಿಸಿದ್ದಾರೆ.
ನವ ವಿವಾಹಿತೆ ಆತ್ಮಹತ್ಯೆ
ಹೆಬ್ಬಗೋಡಿ: ಎಲೆಕ್ಟ್ರಾನಿಕ್ ಸಿಟಿಗೆ ಕೂಗಳತೆ ದೂರದಲ್ಲಿರುವ ವೀರಸಂದ್ರದಲ್ಲಿ ನವ ವಿವಾಹಿತೆ ಶಿವಲೀಲ(21) ಸೀಮೆಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಂಡು ಮೃತಪಟ್ಟಿದ್ದಾರೆ. 9 ತಿಂಗಳ ಹಿಂದಷ್ಟೆ ವಿವಾಹವಾಗಿತ್ತು. ಆತ್ಮಹತ್ಯೆಯ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಹೆಬ್ಬಗೋಡಿ ಪೊಲೀಸರು ಪರಿಶೀಲನೆ ನಡೆಸಿದರು. ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಟೆಕಿ ನೇಣಿಗೆ ಶರಣು
ಬೆಂಗಳೂರು: ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟೆನ್ಸಿಂಗ್ ಟೌನ್ ನಿವಾಸಿ ನೀತುಸೇನ್(35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ವಿಜಯ್ ಪಿಳ್ಳೈ ಅವರನ್ನು ತ್ಯಜಿಸಿದ್ದ ನೀತು ಕಳೆದ ನಾಲ್ಕು ತಿಂಗಳಿಂದ ರೇವತಿ ಅಪಾರ್ಟ್ಮೆಂಟ್ನಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಆ ಮನೆಯಿಂದ ವಾಸನೆ ಬರುತ್ತಿದ್ದುದನ್ನು ಗಮನಿಸಿದ ನೆರೆಮನೆಯವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಎಚ್ಪಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೀತು, ತನ್ನ ಸಾವಿಗೆ ತಾನೇ ಕಾರಣ ಎಂದು ಮೊಬೈಲ್ನಲ್ಲಿ ಟೈಪ್ ಮಾಡಿ ಇಟ್ಟಿದ್ದಾರೆ. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.