ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

11 ಐಎಎಸ್ ಅಧಿಕಾರಿಗಳ ವರ್ಗ

Parashurama
Updated On : 31 Jan 2013, 12:42 pm

ಬೆಂಗಳೂರು: ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮುನಿಸಿಗೆ ಕಾರಣರಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಸೇರಿದಂತೆ 11 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಜತೆಗೆ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಆಸಕ್ತಿಯಿಂದ ನೇಮಕಗೊಳಿಸಿದ್ದ ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಡಿ.ಎನ್. ನರಸಿಂಹರಾಜು ಅವರನ್ನೂ ವರ್ಗಾವಣೆ ಮಾಡಿದ್ದು, ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಬೆಂಬಲಿಗರಿಗೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಟಾಂಗ್ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ವೇದಮೂರ್ತಿ ಅವರನ್ನು ವರ್ಗಾವಣೆ ಮಾಡುವಂತೆ ಕಳೆದ ಒಂದು ತಿಂಗಳಿನಿಂದ ಈಶ್ವರಪ್ಪ ಅವರು ಜಗದೀಶ್ ಶೆಟ್ಟರ್ ಮೇಲೆ ಒತ್ತಡ ಹಾಕಿದ್ದರು. ಇದಕ್ಕೆ ಸ್ಪಂದಿಸದಿದ್ದಾಗ ಮುನಿಸಿಕೊಂಡಿದ್ದರು. ಇದೀಗ ಯಡಿಯೂರಪ್ಪ ಬೆಂಬಲಿಗ ಶಾಸಕರು ರಾಜಿನಾಮೆ ನೀಡುತ್ತಿದ್ದಂತೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಯಡಿಯೂರಪ್ಪ ಅವರಿಗೆ ತಿರುಗೇಟುದ್ದಾರೆ.

ವರ್ಗಾವಣೆಗೊಂಡ ಅಧಿಕಾರಿಗಳು-ಹುದ್ದೆ
ಎಸ್.ಕೆ.ಪಟ್ನಾಯಕ್ - ಪ್ರಧಾನ ಕಾರ್ಯದರ್ಶಿ ಇಂಧನ ಇಲಾಖೆ.
ಡಿ.ಎನ್.ನರಸಿಂಹರಾಜು - ಪ್ರಧಾನ ಕಾರ್ಯದರ್ಶಿ ಡಿಪಿಎಆರ್.
ಜಿ.ಕಲ್ಪನಾ - ವ್ಯವಸ್ಥಾಪಕ ನಿರ್ದೇಶಕಿ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಶನ್.
ಕೆ.ಎಚ್.ಗೋವಿಂದರಾಜು- ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
ವಿಪುಲ್ ಬನ್ಸಾಲ್- ಶಿವಮೊಗ್ಗ ಜಿಲ್ಲಾಧಿಕಾರಿ
ಉಜ್ವಲ್ ಕುಮಾರ್ ಘೋಷ್ - ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೀದರ್ ಜಿಲ್ಲಾ ಪಂಚಾಯಿತಿ
ಎಸ್.ಸಸಿಕಾಂತ್ ಸೇಂತಿಲ್- ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ
ಡಿ.ಕೆ.ರವಿ- ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯಿತ್ ಕೊಪ್ಪಳ
ಎಂ.ವಿ.ವೆಂಕಟೇಶ್ - ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮನಗರ ಜಿಲ್ಲಾ ಪಂಚಾಯಿತಿ
ಪಲ್ಲವಿ ಆಕೃತಿ- ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುಲ್ಬರ್ಗ ಜಿಲ್ಲಾ ಪಂಚಾಯಿತಿ
ಡಾ.ರಾಮೇಗೌಡ- ಮೈಸೂರು ಜಿಲ್ಲಾಧಿಕಾರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments