ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ಲಕ್ಷ್ಮಿನಾರಾಯಣ, ಅನಿತಾ ಮೇಲಿನ ಆರೋಪ ರದ್ದು

Parashurama
Updated On : 31 Jan 2013, 12:40 pm

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರ ಮಸೂದ್‌ನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಜೈಲು ಅಧೀಕ್ಷಕ ಲಕ್ಷ್ಮೀನಾರಾಯಣ ಹಾಗೂ ಉಪ ಅಧೀಕ್ಷಕಿ ಅನಿತಾ ಅವರ ಮೇಲಿನ ಆರೋಪಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಉಗ್ರವಾದದ ಆರೋಪದ ಮೇಲೆ ಪರಪ್ಪರ ಅಗ್ರಹಾರ ಜೈಲಿನಲ್ಲಿದ್ದ ಮಸೂದ್ ಎಂಬಾತನನ್ನು ಜಾಮೀನು ಆದೇಶದ ಫ್ಯಾಕ್ಸ್ ಪ್ರತಿಯ ಆಧಾರದ ಮೇಲೆ ಬಿಡುಗಡೆ ಮಾಡಿದ ಆರೋಪದ ಮೇಲೆ ಲಕ್ಷ್ಮೀನಾರಾಯಣ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.
ನಿಯಮದ ಅನುಸಾರ, ಹೈಕೋರ್ಟ್‌ನಿಂದ ದೊರೆತ ಜಾಮೀನು ಪ್ರತಿಯನ್ನು ಖುದ್ದು ವಕೀಲರೇ ಜೈಲು ಅಧೀಕ್ಷಕರಿಗೆ ತಲುಪಿಸಬೇಕು. ನಂತರ ಕೈದಿಯನ್ನು ಬಿಡುಗಡೆಗೊಳಿಸಬೇಕು. ಆದರೆ, ಮಸೂದ್ ಅನ್ನು ಕೇವಲ ಫ್ಯಾಕ್ಸ್ ಪ್ರತಿಯ ಆಧಾರದ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಆರೋಪಿಸಲಾಗಿತ್ತು.
ಅಲ್ಲದೆ, ಮಸೂದ್ ಅನ್ನು ಬಿಡುಗಡೆಗೊಳಿಸಬಾರದು, ಆತನ ಮೇಲಿನ ಆರೋಪಗಳ ವಿಚಾರಣೆ ಇನ್ನೂ ಬಾಕಿ ಇದೆ ಎಂದು ಇಂಟರ್‌ಪೋಲ್ ಹಾಗೂ ದೆಹಲಿ ಪೊಲೀಸರು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆದರೆ, ಮಾಹಿತಿ ಜೈಲು ತಲುಪುವಷ್ಟರಲ್ಲಿ ಮಸೂದ್ ಅನ್ನು ಬಿಡುಗಡೆಗೊಳಿಸಲಾಗಿತ್ತು. ಇದು ಕರ್ತವ್ಯಲೋಪ ಎಂದು ಆರೋಪಿಸಲಾಗಿತ್ತು.
ಆದರೆ, ಈ ಆರೋಪಗಳನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಲಕ್ಷ್ಮೀನಾರಾಯಣ ಅವರು ಆರೋಪಮುಕ್ತರಾಗಿದ್ದಾರೆ. ಇದರೊಂದಿಗೆ, ಸರ್ಕಾರ ಕೂಡ ಲಕ್ಷ್ಮೀನಾರಾಯಣ ಅವರ ವಿರುದ್ಧದ ಪ್ರಕರಣವನ್ನು ಕೈಬಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments