ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ದರೋಡೆಗೆ ಸಂಚು ನಾಲ್ವರಿಗೆ ಜೈಲು

Parashurama
Updated On : 2 Mar 2013, 1:04 am

ಬೆಂಗಳೂರು: ಮಾರಕಾಸ್ತ್ರಗಳೊಂದಿಗೆ ಡಕಾಯಿತಿಗೆ ಹೊಂಚು ಹಾಕಿ ಕುಳಿತಿದ್ದ ನಾಲ್ವರಿಗೆ 4ನೇ ತ್ವರಿತ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಡಕಾಯಿತರಾದ ವೇಲು (23), ಪ್ರವೀಣ (22), ಸುರೇಶ (32) ಹಾಗೂ ಗಂಗಣ್ಣ (21) ಜೈಲು ಶಿಕ್ಷೆಗೊಳಗಾದವರು. ನ್ಯಾಯಾಧೀಶರಾದ ಐ.ಎಫ್. ಬಿದರಿ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿ ಚನ್ನಪ್ಪ ಬಿ. ಹಲಸೂರು ವಾದ ಮಂಡಿಸಿದ್ದರು.
ಪ್ರಕರಣದ ವಿವರ: 2011ರ ಜುಲೈ 1ರಂದು ರಾತ್ರಿ 9.30ರ ಸುಮಾರಿಗೆ ಯಲಹಂಕದ ವೆಂಕಟಾಲ ಸಮೀಪ ಕೆನಡಿಯನ್ ಶಾಲೆ ಬಳಿಯ ನೀಲಗಿರಿ ತೋಪಿನಲ್ಲಿ ಐವರು ದುಷ್ಕರ್ಮಿಗಳು ದರೋಡೆಗೆ ಸಂಚು ರೂಪಿಸಿ ಕುಳಿತಿದ್ದಾರೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಯಲಹಂಕ ಠಾಣೆ ಇನ್ಸ್‌ಪೆಕ್ಟರ್ ಕೆಂಚೇಗೌಡ ಅವರು ಸಿಬ್ಬಂದಿಯೊಂದಿಗೆ ನೀಲಗಿರಿ ತೋಪಿನ ಬಳಿ ತೆರಳಿ ನಾಲ್ವರನ್ನು ಬಂಧಿಸಿದ್ದರು. ಈ ಸಂದರ್ಭದಲ್ಲಿ ಮತ್ತೊಬ್ಬ ಆರೋಪಿ ಅಜ್ಜು ಎಂಬಾತ ಪರಾರಿಯಾಗಿದ್ದ. ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ 2011ರ ಆಗಸ್ಟ್ 11 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನಂತರ ಪ್ರಕರಣ ವಿಚಾರಣೆ ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾವಣೆಯಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments