ಬೊಮ್ಮನಹಳ್ಳಿಯಲ್ಲಿ ಸಾಮೂಹಿಕ ವಿವಾಹ
ಹೆಬ್ಬಗೋಡಿ: ಬೊಮ್ಮನಹಳ್ಳಿ ಸುತ್ತಮುತ್ತಲ ಮಸೀದಿಗಳು ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸುಮಾರು 51 ಜೋಡಿಗಳು ನವ ಜೀವನಕ್ಕೆ ಕಾಲಿರಿಸಿದವು. ಈ ವಿವಾಹ ಕಾರ್ಯಕ್ರಮದಲ್ಲಿ ಹಿಂದೂಗಳು ಕೂಡ ಭಾಗವಹಿಸಿ ಭಾವೈಕ್ಯತೆ ಮೆರೆದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಯ್ಯದ್ ಅನ್ವರ್, ಬಡ ಕುಟುಂಬದವರಿಗೆ ಉಪಯೋಗವಾಗಲೆಂದು ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು. ಇದರೊಟ್ಟಿಗೆ ಹಿಂದೂ- ಮುಸ್ಲಿಂ ಭಾವೈಕ್ಯತೆಯನ್ನು ಈ ಕಾರ್ಯಕ್ರಮ ಬಿಂಬಿಸಿರುವುದು ಹರ್ಷ ತಂದಿದೆ. ಮುಂದೆಯೂ ಇಂತಹ ಕಾರ್ಯಕ್ರಮಗಳನ್ನು ಮಾಡಲು ಉತ್ಸುಕರಾಗಿದ್ದೆವೆ ಎಂದು ತಿಳಿಸಿದರು.
ಕಾರ್ಯಕ್ರಮದ ಪ್ರಯುಕ್ತ ಸಾವಿರಾರು ಮಂದಿ ಬೊಮ್ಮನಹಳ್ಳಿಯಲ್ಲಿ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಸಯ್ಯದ್ ಸಲೇಹಾ, ರಾಜೇಶ್ ಹಾಗೂ ಇನ್ನಿತರ ಮುಸ್ಲಿಂ ಮುಖಂಡರುಗಳು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.