2ನೇ ಉಪ ಲೋಕಾಯುಕ್ತರಾಗಿ ನ್ಯಾ.ಸುಭಾಷ್ ಬಿ. ಆದಿ ಪ್ರಮಾಣ
ಕ.ಪ್ರ. ವಾರ್ತೆ ಬೆಂಗಳೂರು ಮಾ. 2
ರಾಜ್ಯದ ಎರಡನೇ ಉಪ ಲೋಕಾಯುಕ್ತರಾಗಿ ನ್ಯಾ. ಸುಭಾಷ್ ಬಿ. ಆದಿ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸುಭಾಷ್ ಅವರಿಗೆ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರು ಪ್ರಮಾಣ ವಚನ ಭೋದಿಸಿದರು. ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಭಾಷ್ ಬಿ. ಆದಿ ಅವರು ಶುಕ್ರವಾರ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಆರ್.ಅಶೋಕ, ಹೈಕೋರ್ಟ್ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಉಪಸ್ಥಿತರಿದ್ದರು.
1951ರ ಆಗಸ್ಟ್ 10ರಂದು ಸಂಕೇಶ್ವರದಲ್ಲಿ ಜನಿಸಿದ ನ್ಯಾ. ಸುಭಾಷ್ ಅವರು ಹುಬ್ಬಳ್ಳಿಯಲ್ಲಿ ಕಾನೂನು ಪದವಿ ಪಡೆದರು. 1978ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿ ರಿಟ್, ಸಿವಿಲ್, ಕ್ರಿಮಿನಲ್ ವಿಷಯಗಳಲ್ಲಿ ಪ್ರಾವಿಣ್ಯತೆ ಪಡೆದಿದ್ದಾರೆ. 2006ರಲ್ಲಿ ರಾಜ್ಯ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2007ರಲ್ಲಿ ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ನ್ಯಾ.ಸುಭಾಷ್ ಬಿ.ಆದಿ ಅವರ ನೇಮಕ ವಿಚಾರವನ್ನು 'ಕನ್ನಡಪ್ರಭ' ಎರಡು ದಿನಗಳ ಹಿಂದೆ ಪ್ರಕಟಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.