ಮಹದೇವಪ್ಪಗೆ ಚೌಡಯ್ಯ ಪ್ರಶಸ್ತಿ
ಬೆಂಗಳೂರು: ಪಿಟೀಲು ವಿದ್ವಾನ್ ಮೈಸೂರು ಮಹದೇವಪ್ಪ ಅವರನ್ನು ಸರ್ಕಾರ 2010ನೇ ಸಾಲಿನ ಪಿಟೀಲು ಚೌಡಯ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಬೆಂಗಳೂರಿನ ನಾರಾಯಣರಾವ್ ಮಾನೆ ಅವರನ್ನು 2011ನೇ ಸಾಲಿನ ಸಂತ ಶಿಶುನಾಳ ಪ್ರಶಸ್ತಿಗೆ, ಕಾಶಿಬಾಯಿ ದಾನದಟ್ಟಿ ಅವರನ್ನು ಜಾನಪದಶ್ರೀ ಪ್ರಶಸ್ತಿಗೆ, ಗೌರಿಬಿದನೂರಿನ ವಿದ್ವಾನ್ ಕುರುಡಿ ವೆಂಕಣ್ಣಾಚಾರ್ ಅವರನ್ನು ನಿಜಗುಣ ಪುರಂದರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದೇ ರೀತಿ 2012ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸೋಮಲಿಂಗಪ್ಪ ಫಕೀರಪ್ಪ ದೊಡವಾಡ ಅವರನ್ನು ಮತ್ತು ಕಾ.ತ. ಚಿಕ್ಕಣ್ಣ ಅವರನ್ನು ಕನಕಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.