ಜೋಶಿ, ಸರ್ಕಾರದ ವಿರುದ್ಧ ಆಯೋಗಕ್ಕೆ ಜೆಡಿಎಸ್ ದೂರು
ಕ.ಪ್ರ. ವಾರ್ತೆ ಬೆಂಗಳೂರು ಮಾ.26-
ಭಾರತದ ನ್ಯಾಯಾಂಗ ವ್ಯವಸ್ಥೆಯನ್ನು ಮಂಗನಿಗೆ ಹೋಲಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಬೇಜವಾಬ್ದಾರಿ ಹೇಳಿಕೆಯೂ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಧಾರವಾಡದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಜೋಶಿ ಈ ಹೇಳಿಕೆ ನೀಡಿದ್ದಾರೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವಾಗಿದ್ದು, ಭಾರತದ ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಪ್ರಜಾಪ್ರತಿನಿಧಿ ಕಾಯಿದೆ 125 ಸೆಕ್ಷನ್ ಅಡಿ ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಆಯೋಗ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಅದೇ ರೀತಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲೇ ಸರ್ಕಾರ ಹಲವು ಅಭಿವೃದ್ಧಿ ಯೋಜನೆಗಳನ್ನು ಪ್ರಕಟಿಸಿದೆ. ಇದು ಕಾನೂನು ಬಾಹಿರವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.